ಜಮ್ಮು-ಕಾಶ್ಮೀರ: ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ 2 ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಗಡಿ ನಿಯಂತ್ರಣ ರೇಖೆ ಬಳಿ ಶುಕ್ರವಾರ ರಾತ್ರಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. 

ಬಾರಾಮುಲ್ಲಾ ಜಿಲ್ಲೆಯ ರಾಮ್ಪುರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿತ್ತು ಎಂದು ರಕ್ಷಣಾ ವಕ್ತಾರ ಕಲೊನೆಲ್ ರಾಜೇಶ್ ಕಾಲಿಯಾ ಅವರು ತಿಳಿಸಿದ್ದರು. 

ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು. ಈ ಪೈಕಿ ಇದೀಗ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com