

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಕಳೆದ ರಾತ್ರಿ ಪಾಕಿಸ್ತಾನ ಸೇನೆ ಬಾರಾಮುಲ್ಲಾ ಜಿಲ್ಲೆ. ರಾಮ್ಪುರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ವಕ್ತಾರ ಕಲೊನೆಲ್ ರಾಜೇಶ್ ಕಾಲಿಯಾ ಅವಲು ಹೇಳಿದ್ದಾರೆ.
ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಇದೀಗ ಭಾರತೀಯ ಸೇನೆ ಕೂಡ ದಿಟ್ಟ ಉತ್ತರ ನೀಡಿದೆ ಎಂದು ತಿಳಿಸಿದ್ದಾರೆ.