ಪುಲ್ವಾಮದಲ್ಲಿ ಅಡಗಿ ಕುಳಿತಿರುವ 3-4 ಉಗ್ರರು: ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿದೆ ಎಂದು ಶನಿವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿದೆ ಎಂದು ಶನಿವಾರ ತಿಳಿದುಬಂದಿದೆ. 

ಪುಲ್ವಾಮಾ ಜಿಲ್ಲೆಯ ದಂಗೇರ್ಪೊರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಭಾರತೀಯ ಸೇನೆಯ 55 ರಾಷ್ಟ್ರೀಯ ರೈಫಲ್ಸ್ ಪಡೆಗಳು, ಸಿಆರ್'ಪಿಎಫ್'ನ 182 ಮತ್ತು 183ನೇ ಬೆಟಾಲಿಯನ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿವೆ ಎಂದು ತಿಳಿದುಬಂದಿದೆ. 

ಪ್ರಸ್ತುತ ಈ ಪ್ರದೇಶದ ಸುತ್ತಲೂ ಭದ್ರತಾಪಡೆಗಳು ಸುತ್ತುವರೆದಿದ್ದು, ಎನ್'ಕೌಂಟರ್ ನಡೆಸಲು ಆರಂಭಿಸಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದು, ಈ ವರೆಗೂ ಯಾವುದೇ ಸಾವು-ನೋವುಗಳಾಗಿರುವ ಕುರಿತು ವರದಿಯಾಗಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com