ಧಾರ್ಮಿಕ ಭಾವನೆಗೆ ಧಕ್ಕೆ: ಅರ್ನಬ್ ಗೋಸ್ವಾಮಿ ವಿರುದ್ಧ ಕೇಸ್ ದಾಖಲು

ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ  ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರ ವಿರುದ್ಧ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ.
ಅರ್ನಬ್ ಗೋಸ್ವಾಮಿ
ಅರ್ನಬ್ ಗೋಸ್ವಾಮಿ
Updated on

ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ  ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರ ವಿರುದ್ಧ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ.

ಪೈಧೋನಿ ಪೊಲೀಸ್ ಠಾಣೆಯಲ್ಲಿ ಅರ್ನಬ್ ಗೋಸ್ವಾಮಿ ಹಾಗೂ ಇತರೆ ಇಬ್ಬರ  ವಿರುದ್ಧ ಕೇಸ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ವಿಸ್ತರಿಸಿದ ನಂತರ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಾಂದ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಈ ಘಟನೆಗೂ ಬಾಂದ್ರಾದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅರ್ನಬ್ ಅವರು ಮಸೀದಿಯ ಚಿತ್ರ ತೋರಿಸಿ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರಝಾ ಎಜುಕೇಷನ್ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಇರ್ಫಾನ್ ಅಬೂಬಕರ್ ಶೈಖ್ ಎಂಬುವವರು ಪೊಲೀಸರು ದೂರೂ ನೀಡಿದ್ದರು.

ಶೈಕ್ ದೂರಿನ ಆಧಾರದ ಮೇಲೆ ಪೊಲೀಸರು ಅರ್ಬನ್ ಗೋಸ್ವಾಮಿ ಹಾಗೂ ಇತರೆ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 500, 511 ಮತ್ತು 120 ಬಿ ಅಡಿ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com