ಮೇ 31ಕ್ಕೆ ನಡೆಯಬೇಕಾಗಿದ್ದ ಯುಪಿಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಮೇ 31ರಂದು ನಡೆಯಬೇಕಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್) ಸೋಮವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮೇ 31ರಂದು ನಡೆಯಬೇಕಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್) ಸೋಮವಾರ ತಿಳಿಸಿದೆ.

ಇಂದು ನಡೆದ ಆಯೋಗದ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಮೂರನೇ ಹಂತದ ಲಾಕ್ ಡೌನ್ ಮೇ 4ರಿಂದ 17ರವರೆಗೆ ಮುಂದುವರಿಸಿರುವ ಹಿನ್ನೆಲೆಯಲ್ಲಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಯುಪಿಎಸ್ ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ನಿರ್ಬಂಧ ಮುಂದುವರಿಸಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದಾಗಲಿ ಮತ್ತು ಸಂದರ್ಶನ ನಡೆಸುವುದು ಸಾಧ್ಯವಿಲ್ಲ. ಹೀಗಾಗಿ ಮೇ 31ಕ್ಕೆ ನಿಗದಿಯಾಗಿದ್ದ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ಇಂಡಿಯನ್ ಫಾರೆಸ್ಟ್ ಸರ್ವೀಸ್ ಎಕ್ಸಾಮಿನೇಷನ್ ಗಾಗಿ ಸ್ಕ್ರೀನಿಂಗ್ ಪರೀಕ್ಷೆ ಕೂಡಾ ನಡೆಯಬೇಕಾಗಿದ್ದು, ಐಎಫ್ ಎಸ್ ಪರೀಕ್ಷೆಯನ್ನು ಕೂಡಾ ಮುಂದೂಡಲಾಗಿದೆ. ಮೇ 20ರಂದು ಮತ್ತೊಮ್ಮೆ ಪರಿಸ್ಥಿತಿಯನ್ನು ಅವಲೋಕಿಸಿ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ಯುಪಿಎಸ್ ಸಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com