ದೇಶ

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.27.52ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.27.52ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ
ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.27.52ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.


ಕಳೆದ 24 ಗಂಟೆಯಲ್ಲಿ 1,074 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಆ ಮೂಲಕ ಈವರೆಗೂ 11,706 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಮಾರಕ ಸೋಂಕಿನಿಂದ ಗುಣವಾಗುವ ಪ್ರಮಾಣ  ಶೇ.27.52ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 42,533 ಪ್ರಕರಣಗಳು ಈವರೆಗೆ ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಮಾಹಿತಿ ನೀಡಿದ್ದಾರೆ.

ಆದರೆ, ಕರ್ನಾಟಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಹೊಸದಾಗಿ 37 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 651 ಪ್ರಕರಣಗಳು ದಾಖಲಾಗಿವೆ. ಇಂದು ದಾವಣಗೆರೆಯಲ್ಲಿ 22,  ಬೀದರ್ 7, ಮಂಡ್ಯ 2 ಹಾಗೂ  ಕಲಬುರಗಿಯಲ್ಲಿ 2 ಮತ್ತು ಚಿಕ್ಕಬಳ್ಳಾಪುರ, ಹಾವೇರಿ, ವಿಜಯಪು, ಬೆಂಗಳೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.