ರಾಹುಲ್ ಗಾಂಧಿ
ರಾಹುಲ್ ಗಾಂಧಿ

ವಲಸೆ ಕಾರ್ಮಿಕರಿಂದ ರೈಲು ಪ್ರಯಾಣ ವೆಚ್ಚ ವಸೂಲಿ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ಕೋವಿಡ್-19 ಲಾಕ್ ಡೌನ್ ಅವಧಿಯಲ್ಲಿ ರೈಲು ಪ್ರಯಾಣ ವೆಚ್ಚವನ್ನು ವಲಸೆ ಕಾರ್ಮಿಕರಿಂದ ವಸೂಲಿ ಮಾಡುತ್ತಿರುವುದಕ್ಕೆ ಕೇಂದ್ರಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕೋವಿಡ್-19 ಲಾಕ್ ಡೌನ್ ಅವಧಿಯಲ್ಲಿ ರೈಲು ಪ್ರಯಾಣ ವೆಚ್ಚವನ್ನು ವಲಸೆ ಕಾರ್ಮಿಕರಿಂದ ವಸೂಲಿ ಮಾಡುತ್ತಿರುವುದಕ್ಕೆ ಕೇಂದ್ರಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಾರತೀಯ ರೈಲ್ವೆ ಒಂದು ಕಡೆ ವಲಸೆ ಕಾರ್ಮಿಕರಿಂದ ರೈಲು ಪ್ರಯಾಣ ವೆಚ್ಚವನ್ನು ವಸೂಲಿ ಮಾಡುತ್ತಿದೆ. ಮತ್ತೊಂದೆಡೆ ಪ್ರಧಾನ ಮಂತ್ರಿ ಕೇರ್ಸ್ ಫಂಡ್ ಗೆ ಹಣವನ್ನು ನೀಡುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. 

ದೇಶದ ವಿವಿಧ ಭಾಗಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ಊಟ, ವಸತಿ ಇಲ್ಲದೆ ನರಳುತ್ತಿರುವ ವಲಸೆ ಕಾರ್ಮಿಕರಿಂದ ರೈಲು ಪ್ರಯಾಣವನ್ನು ವಸೂಲಿ ಮಾಡುತ್ತಿರುವ ರೈಲ್ವೆ ಸಚಿವಾಲಯ, ಪಿಎಂ- ಕೇರ್ಸ್ ಫಂಡ್ ಗೆ 151 ಕೋಟಿ ನೆರವು ನೀಡಿದೆ. ಈ ಗೊಂದಲವನ್ನು ಪರಿಹರಿಸಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com