ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ಪಾಸಿಟಿವ್!

ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮಂಟ್ ನಲ್ಲಿರುವ ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮಂಟ್ ನಲ್ಲಿರುವ ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಆಸ್ಪತ್ರೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುವತ್ತಿರುವ, ನಿವೃತ್ತಿಗೊಂಂಡಿರುವ ಯೋಧರು ಹಾಗೂ ಅವರ ಕುಟುಂಬಸ್ಥರ ದಾಖಲಾಗಿದ್ದರು. ಇದೀಗ 24 ಮಂದಿಯಲ್ಲಿ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇತರೆ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ರೋಗಿಗಳಲ್ಲಿ ವೈರಸ್ ದೃಢಪಡುತ್ತಿದ್ದಂತೆಯೇ ಕ್ವಾರಂಟೈನ್ ನಿಮಯಗಳನ್ನ ಅನುಸರಿಸಲಾಗುತ್ತಿದೆ. ಸೋಂಕಿತರ ಸಂಪರ್ಕ ಕುರಿತು ಪರಿಶೀಲನೆ ಮುಂದುವರೆದಿದೆ. ಸೋಂಕು ಪತ್ತೆಯಾಗುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದವರೆಲ್ಲರನ್ನೂ ಸ್ಥಳಾಂತರಿಸಲಾಗುತ್ತಿದೆ. ಕೂಡಲೇ ಕಟ್ಟಡವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈ ಹಿಂದೆ ಕೂಡ ಮುಂಬೈನಲ್ಲಿ 26 ನೌಕಾ ಪಡೆಯ ಯೋಧರಲ್ಲಿ ಸೋಂಕು ಪತ್ತೆಯಾಗಿತ್ತು. ಬಳಿಕ ನೌಕಾಪಡೆ 15 ಮಂದಿ ಅಧಿಕಾರಿಗಳನ್ನ ಕ್ವಾರಂಟೈನ್ ನಲ್ಲಿರಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com