ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಅಮಿತ್ ಶಾ ಕಳವಳ

ಬಿಎಸ್ಎಫ್ ಮತ್ತು ಸಿಆರ್ ಪಿಎಫ್ ನಂತಹ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಬಿಎಸ್ಎಫ್ ಮತ್ತು ಸಿಆರ್ ಪಿಎಫ್ ನಂತಹ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮಹಾಮಾರಿ ಸಶಸ್ತ್ರ ಪಡೆಗಳಿಗೆ ಹರಡುತ್ತಿರುವ ಕುರಿತು ಕೇಂದ್ರ ಗೃಹ ಸಚಿವರು ಉನ್ನತ ಮಟ್ಟದ ಸಭೆ ನಡೆಸಿದ್ದು, ಭದ್ರತಾ ಪಡೆಗಳ ಸುರಕ್ಷತೆ ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಸಭೆಯಲ್ಲಿ ಬಿಎಸ್ಎಫ್, ಸಿಆರ್ ಪಿಎಫ್, ಸಿಐಎಸ್ಎಫ್, ಐಟಿಬಿಪಿ, ಎಸ್ಎಸ್ ಬಿ ಮತ್ತು ಎನ್ ಎಸ್ ಜಿ ಗಳ ಮಹಾ ನಿರ್ದೇಶಕರು ಭಾಗವಹಿಸಿದ್ದರು.

ಇದುವರೆಗೆ ಬಿಎಸ್ಎಫ್ 221 ಸಿಬ್ಬಂದಿಗೆ, ಸಿಆರ್ ಪಿಎಫ್ ನ 161 ಸಿಬ್ಬಂದಿ ಮತ್ತು ಸಿಐಎಸ್ಎಫ್ 35 ಸಿಬ್ಬಂದಿ ಸೇರಿದಂತೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 530 ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com