

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸಲು ವಿಫಲವಾದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಆಯುಕ್ತರನ್ನು ಶುಕ್ತವಾರ ವರ್ಗಾವಣೆ ಮಾಡಲಾಗಿದೆ.
ಉದ್ಧವ್ ಠಾಕ್ರೆ ಸರ್ಕಾರ ಬಿಎಂಸಿ ಆಯುಕ್ತ ಪ್ರವೀಣ್ ಪ್ರದೇಶಿ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಇಖ್ಬಾಲ್ ಚಹಾಲ್ ಅವರನ್ನು ನೇಮಿಸಲಾಗಿದೆ.
ಪ್ರದೇಶಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.