30,000 ಕಾರ್ಮಿಕರನ್ನು ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಬಂಗಾಳ ಗ್ರೀನ್ ಸಿಗ್ನಲ್! 

ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ 30,000 ಕಾರ್ಮಿಕರನ್ನು ರಾಜ್ಯಕ್ಕೆ ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಲ್ಕತ್ತಾ: ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ 30,000 ಕಾರ್ಮಿಕರನ್ನು ರಾಜ್ಯಕ್ಕೆ ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 

ತಮಿಳುನಾಡು, ತೆಲಂಗಾಣ, ಕರ್ನಾಟಕ, ಪಂಜಾಬ್ ರಾಜ್ಯಗಳಲ್ಲಿ ಲಾಕ್ ಡೌನ್ ಪರಿಣಾಮ ಪಶ್ಚಿಮ ಬಂಗಾಳದ 30,000 ಕಾರ್ಮಿಕರು ಸಿಲುಕಿಕೊಂಡಿದ್ದು, ಅವರನ್ನು ರಾಜ್ಯಕ್ಕೆ ವಾಪಸ್ ಕರೆತರಬೇಕಿದೆ, ಇದಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗುವುದು ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಬೇರೆ ಬೇರ ಭಾಗಗಳಲ್ಲಿ ಸಿಲುಕಿಕೊಂಡಿರುವವರ ಪೈಕಿ ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಪ್ರವಾಸಿಗರೂ ಸೇರಿದ್ದಾರೆ. ಯಾವ ಭಾಗಗಳಲ್ಲಿ ಪಶ್ಚಿಮ ಬಂಗಾಳದ ಜನತೆ ಸಿಲುಕಿಕೊಂಡಿದ್ದಾರೋ ಆ ರಾಜ್ಯಗಳ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೇವೆ, ಪಶ್ಚಿಮ ಬಂಗಾಳದಿಂದ ಒಟ್ಟಾರೆ 31,224 ಜನರು ದೇಶದ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ, ಈ ಪೈಕಿ 17,000 ಜನರು ತೆಲಂಗಾಣದಲ್ಲೇ ಸಿಲುಕಿದ್ದಾರೆ ಎಂದು ಪಶ್ಚಿಮ ಬಂಗಾಳದ ಅಧಿಕಾರಿಗಳು ಹೇಳಿದ್ದಾರೆ.

ಮೇ.10 ರಂದು ತೆಲಂಗಾಣಕ್ಕೆ ಮಾಲ್ಡಾದಿಂದ ರೈಲು ಸಂಚರಿಸಲಿದೆ. 7,5000 ಜನರನ್ನು ಕರೆತರಲು ಬೆಂಗಳೂರಿಗೆ ಬೆಂಗಳೂರಿಗೆ ಸಂಚರಿಸಲಿದೆ ಎಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಸ್ಪಷ್ಟಪಡಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com