ದೇಶ

ಗುಜರಾತ್, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿ 60,000 ಗಡಿಯತ್ತ ಸೋಂಕಿತರ ಸಂಖ್ಯೆ

ಗುಜರಾತ್, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿ 60,000 ಗಡಿಯತ್ತ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ಗುಜರಾತ್, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 3320 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 60,000 ಗಡಿಯತ್ತ ಸಾಗಿದೆ. 

ಶುಕ್ರವಾರ ಒಂದೇ ದಿನ 3320 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59662ಕ್ಕೆ ತಲುಪಿದೆ. 

ಮೇ.1 ರಿಂದ ಪ್ರತೀನಿತ್ಯ ಕನಿಷ್ಟ 2000ಕ್ಕಿಂತ ಹೆಚ್ಚು ಸೋಂಕು ದಾಖಲಾಗುವ ಬೆಳವಣಿಗೆ ಮುಂದುವರೆದಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 95 ಮಂದಿ ಸಾವನ್ನಪ್ಪಿದ್ದು, ಈವರೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ  1981ಕ್ಕೆ ತಲುಪಿದೆ. 

ಇನ್ನು 59662 ಮಂದಿ ಸೋಂಕಿತರ ಪೈಕಿ 17847 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇದೀಗ 39834 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಅತೀ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿರುವ ಮಹಾರಾಷ್ಟ್ರದಲ್ಲಿ ಶುಕ್ರವಾರ 1080 ಹೊಸ ಪ್ರಕರಣ, 37 ಸಾವು ದಾಖಲಾಗಿದೆ. ಉಳಿದಂತೆ ತಮಿಳುನಾಡಲ್ಲಿ 600 ಸೋಂಕು ಗುಜರಾತ್'ನಲ್ಲಿ 390 ಸೋಂಕು, ಮಧ್ಯಪ್ರದೇಶದಲಲಿ 89 ಸೋಂಕು ರಾಜಸ್ತಾನದಲ್ಲಿ 62 ಸೋಂಕು ದಾಖಲಾಗಿದೆ. 

ಈ ನಡುವೆ ದೇಶದ ಮಹಾನಗರಗಳಲ್ಲಿ ಹೆಚ್ಚು ಸೋಂಕು ದಾಖಲಾಗುವ ಬೆಳವಣಿಗೆಯೂ ಮುಂದುವರೆದಿದೆ. ಶುಕ್ರವಾರ ಮುಂಬೈನಲ್ಲಿ 748, ಅಹಮದಾಬಾದ್'ನಲ್ಲಿ 269, ಪುಣೆಯಲ್ಲಿ 48, ಜೈಪುರದಲ್ಲಿ 26 ಹೊಸ ಸೋಂಕಿನ ಪ್ರಕರಣ ಬೆಳಕಿಗೆ ಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.