ಮುಂಬೈ ಪೊಲೀಸ್ ಕಲ್ಯಾಣ ನಿಧಿಗೆ ವಿರಾಟ್, ಅನುಷ್ಕಾ ತಲಾ 5 ಲಕ್ಷ ರೂ. ದೇಣಿಗೆ

ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ಪೊಲೀಸರ ಕಲ್ಯಾಣ ನಿಧಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ತಲಾ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.
ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂಬೈ: ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ಪೊಲೀಸರ ಕಲ್ಯಾಣ ನಿಧಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ತಲಾ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.

ಮುಂಬೈ ಪೊಲೀಸರ ಕಲ್ಯಾಣ ನಿಟ್ಟಿನಲ್ಲಿ ತಲಾ 5 ಲಕ್ಷ ರೂಪಾಯಿ ಕೊಡುಗೆ ನೀಡಿರುವ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರಿಗೆ ಧನ್ಯವಾದಗಳು. ನಿಮ್ಮ ಕೊಡುಗೆ ಕೊರೋನಾವೈರಸ್  ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರನ್ನು ರಕ್ಷಿಸಲಿದೆ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಫಿಎಂ - ಕೇರ್ಸ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ದೇಣಿಗೆ ನೀಡಿದ್ದರು. ಆದರೆ, ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಜನರು ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com