ಲಾಕ್ ಡೌನ್: ಕಟ್ಟಡ ಕಾರ್ಮಿಕರಿಗೆ 5 ಸಾವಿರ ರೂ. ಸಹಾಯಧನ ಘೋಷಿಸಿದ ದೆಹಲಿ ಸರ್ಕಾರ

ಕೊರೋನಾ ವೈರಸ್ ಲಾಕ್ ಡೌನ್ ಪರಿಣಾಮ ದೆಹಲಿ ಸರ್ಕಾರ ಸೋಮವಾರ ಮತ್ತೊಂದು ಆರ್ಥಿಕ ನೆರವು ಘೋಷಿಸಿದ್ದು, ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ತಲಾ 5 ಸಾವಿರ ರೂಪಾಯಿ ನೀಡುವುದಾಗಿ ಹೇಳಿದೆ.
ಗೋಪಾಲ್ ರೈ
ಗೋಪಾಲ್ ರೈ

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಣಾಮ ದೆಹಲಿ ಸರ್ಕಾರ ಸೋಮವಾರ ಮತ್ತೊಂದು ಆರ್ಥಿಕ ನೆರವು ಘೋಷಿಸಿದ್ದು, ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ತಲಾ 5 ಸಾವಿರ ರೂಪಾಯಿ ನೀಡುವುದಾಗಿ ಹೇಳಿದೆ.

ದೆಹಲಿ ಕಾರ್ಮಿಕ ಸಚಿವ ಗೋಪಾಲ್ ರೈ ಅವರ ನೇತೃತ್ವದಲ್ಲಿ ಇಂದು ನಡೆದ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಂಡಳಿಯೊಂದಿಗೆ ಸುಮಾರು 40 ಸಾವಿರ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ನೋಂದಣಿ ಮಾಡಿಕೊಳ್ಳದವರು ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಶೀಘ್ರದಲ್ಲೇ ವೆಬ್ ಪೋರ್ಟಲ್ ಆರಂಭಿಸಲು ಸಭೆ ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com