ರೈಲು ಪ್ರಯಾಣಿಕರಿಗೆ ಮೂರು ನಿಯಮ ರೂಪಿಸಿದ ಕೇಂದ್ರ ಗೃಹ ಸಚಿವಾಲಯ
ನವದೆಹಲಿ: ಕೇಂದ್ರ ಗೃಹ ಸಚಿವಾಲಯ ರೈಲುಗಳ ಸೋಮವಾರ ಮೂರು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,ಕೊವಿಡ್-19 ಲಕ್ಷಣ ರಹಿತ ಮತ್ತು ಸೀಟ್ ಖಚಿತವಾದ ಟಿಕೆಟ್ ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ.
ಎಲ್ಲಾ ಪ್ರಯಾಣಿಕರು ಫೇಸ್ ಮಾಸ್ಕ್ ಧರಿಸಬೇಕು ಮತ್ತು ನಿಲ್ದಾಣಕ್ಕೆ ಪ್ರವೇಶಿಸುವಾಗ ಮತ್ತು ಪ್ರಯಾಣದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಹೇಳಿದ್ದಾರೆ.
1. ಕನ್ಫರ್ಮ್ ಆದ ಇ-ಟಿಕೆಟ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ರೈಲು ನಿಲ್ದಾಣ ಪ್ರವೇಶಿಸಲು ಅವಕಾಶ ನೀಡಲಾಗುವುದು.
2. ರೈಲ್ವೆ ಸಿಬ್ಬಂದಿ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಲಕ್ಷ ರಹಿತ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣ ಪ್ರವೇಶಕ್ಕೆ ಅಥವಾ ಪ್ರಯಾಣಕ್ಕೆ ಅವಕಾಶ ನೀಡಬೇಕು.
3. ಎಲ್ಲಾ ಪ್ರಯಾಣಿಕರಿಗೂ ರೈಲ್ವೆ ನಿಲ್ದಾಣ ಮತ್ತು ರೈಲು ಬೋಗಿಗಳಲ್ಲಿ ಕಡ್ಡಾಯವಾಗಿ ಹ್ಯಾಂಡ್ ಸಾನಿಟೈಸರ್ ನೀಡಬೇಕು ಎಂದು ಗೃಹ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಮಾರ್ಚ್ 25 ರಂದು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಪ್ರಯಾಣಿಕರ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ನಾಳೆಯಿಂದ 15 ರೈಲುಗಳ ಸಂಚಾರ ಆರಂಭವಾಗಲಿದೆ. ಮಂಗಳವಾರದ ಪ್ರಯಾಣಕ್ಕೆ ಇಂದಿನಿಂದಲೇ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ