ದೇಶಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 3604 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ. 

70756 ಮಂದಿ ಸೋಂಕಿತರ ಪೈಕಿ ಈ ವರೆಗೂ 22454 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 46008 ಮಂದಿ ಇನ್ನೂ ಸೋಂಕಿನಿಂದ ಬಳಲುತ್ತಿದ್ದಾರೆ. 

ಈ ನಡುವೆ ದೇಶದಲ್ಲಿ ಈ ವರೆಗೂ 2293 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ದೇಶದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗತೊಡಗಿದೆ. 

ಕೊರೋನಾ ಇನ್ನೂ ಸಮುದಾಯ ಹಂತ ತಲುಪಿಲ್ಲ:
ಭಾರತದಲ್ಲಿ ಕೊರೋನಾ ಸೋಂಕು ಸಮುದಾಯ ಹಂತ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನಃ ಸ್ಪಷ್ಟಪಡಿಸಿದೆ. 

ಕೆಲವೇ ಕೆಲವು ಕ್ಲಸ್ಟರ್'ಗಳು ಇದ್ದು, ಅವುಗಳನ್ನು ಗುರುತಿಸಲಾಗಿದೆ. ಅಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಜರುಗಿಸಲಾಗಿದೆ ಎಂದು ಹೇಳಿದೆ. 

ದೇಶದಲ್ಲಿ 24 ಗಂಟೆಗಳಲ್ಲಿ 4213 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆದರೆ, ಸೋಂಕು ಸಾಮುದಾಯಿಕವಾಗಿಲ್ಲ. ಕೆಲವು ಕ್ಲಸ್ಟರ್ ಗಳಲ್ಲಿ ಸೋಂಕು ವ್ಯಾಪಕವಾಗಿದೆ ಎಂದು ಕೇಂದ್ರ ಸಚಿವ ವಲ್ ಅಗರ್ವಾಲ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com