ಆರ್ಥಿಕ ಪ್ಯಾಕೇಜ್ ಮರು ಪರಿಶೀಲಿಸಿ, ನೇರವಾಗಿ ಜನರ ಖಾತೆಗಳಿಗೆ ಹಣ ವರ್ಗಾಯಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ

ಕೊರೋನಾ ವೈರಸ್ ಬಿಕ್ಕಟ್ಟು ಎದುರಿಸುವ ಸಲುವಾಗಿ ಕೇಂದ್ರ ಸರ್ಕಾರ ರೂ.20 ಲಕ್ಷ ಕೋಟಿಗಳ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಆರ್ಥಿಕ ಪ್ಯಾಕೇಜ್ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮರು ಪರಿಶೀಲನೆ ನಡೆಸಿ ಜನರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಬೇಕಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಕೊರೋನಾ ವೈರಸ್ ಬಿಕ್ಕಟ್ಟು ಎದುರಿಸುವ ಸಲುವಾಗಿ ಕೇಂದ್ರ ಸರ್ಕಾರ ರೂ.20 ಲಕ್ಷ ಕೋಟಿಗಳ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಆರ್ಥಿಕ ಪ್ಯಾಕೇಜ್ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮರು ಪರಿಶೀಲನೆ ನಡೆಸಿ ಜನರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಬೇಕಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ದೇಶದಲ್ಲಿರುವ ಜನರಿಗೆ ಇಂದು ಹಣದ ಅಗತ್ಯತೆ ಹೆಚ್ಚಾಗಿದೆ. ಪ್ರಧಾನಿ ಮೋದಿಯವರು ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್'ನ್ನು ಮರು ಪರಿಶೀಲನೆ ನಡೆಸಬೇಕಿದೆ. ಜನರ ಖಾತೆಗಳಿಗೇ ಕೇಂದ್ರ ಸರ್ಕಾರ ಹಣವನ್ನು ನೇರವಾಗಿ ವರ್ಗಾವಣೆ ಮಾಡಬೇಕಿದೆ ಎಂದು ಹೇಳಿದ್ದಾರೆ. 

ಪ್ರಧಾನಿ ಮೋದಿಯವರು ಖಾತೆಗಳಿಗೆ ಹಣ ವರ್ಗಾವಣೆ, ಮನ್ರೇಗಾ ಅಡಿಯಲ್ಲಿರುವ 200 ಕಾರ್ಯಕಾರಿ ದಿನಗಳು ಹಾಗೂ ರೈತರ ಕುರಿತು ಚಿಂತನೆ ನಡೆಸೂಬೇಕಿದೆ. ಇವರೆಲ್ಲರೂ ಭಾರತದ ಭವಿಷ್ಯವಾಗಿದ್ದಾರೆ. ಕೇಂದ್ರ ಸರ್ಕಾರ ಜನರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಬೇಕಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಲದ ಅಗತ್ಯವಿಲ್ಲ. ಮಕ್ಕಳು ಸಂಕಷ್ಟದಲ್ಲಿದ್ದಾಗ ತಾಯಿ ಸಾಲ ನೀಡುವುದಿಲ್ಲ. ಬದಲಾಗಿ ಸಂಕಷ್ಟಕ್ಕೆ ನೆರವಾಗುತ್ತಾಳೆ. ಹಾಗೆಯೇ ಕೇಂದ್ರ ಕೂಡ ಜನರ ಜೇಬಿಗೇ ಹಣ ತಲುಪುವಂತೆ ಮಾಡಬೇಕಿದೆ. ಮಕ್ಕಳಿಗೆ ತಿನ್ನಲು ಆಹಾರ ದೊರಕಲು ತಾಯಿ ಏನೂ ಬೇಕಾದರೂ ಮಾಡುತ್ತಾರೆ. ಅದೇ ರೀತಿ ಸರ್ಕಾರ ಕೂಡ ಜನರ ಖಾತೆಗಳಿಗೆ ಹಣವನ್ನು ಜಮೆ ಮಾಡಬೇಕು. ಇದನ್ನು ಮಾಡದಿದ್ದರೆ, ದುರಂತ ಸಮಸ್ಯೆಯಾಗಿ ಪರಿಣಮಿಸಲಿದೆ ಎಂದು ತಿಳಿಸಿದ್ದಾರೆ. 

ಲಾಕ್'ಡೌನ್ ಕೇವಲ ವೈರಸ್ ಹರಡದಿರಲು ನೀಡಿರುವ ವಿರಾಮವಷ್ಟೇ. ದೇಶದಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣ 85 ಸಾವಿರ ಗಡಿ ದಾಟಿದೆ. ಅಲ್ಲದೆ, ಇದೂವರೆಗೆ 2700 ಜನರು ಬಲಿಯಾಗಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು. ಇದರಿಂದಾಗಿ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ. ಪ್ರಮುಖವಾಗಿ ವಲಸೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. 

ಕಳೆದ ಹಲವು ದಿನಗಳಲ್ಲಿ ಪುರುಷರು, ಮಹಿಳೆಯರು ಮಕ್ಕಳ ಜೊತೆಗೆ ನೂರಾರು ಕಿಲೋ ಮೀಟರ್ ಮನೆಗಳಿಗೆ ನಡೆದು ಹೋಗುತ್ತಿದ್ದಾರೆ. ಹಣ, ಆಹಾರ, ನೀರು, ಆಶ್ರಯವಿಲ್ಲದ ಸಂಕಟದ ದೃಶ್ಯಗಳು ಬಹಿರಂಗವಾಗಿ ಕಾಣಿಸುತ್ತಿದೆ. ನನ್ನ ಸಲಹೆಯನ್ನು ಸರ್ಕಾರ ಪರಿಗಣಿಸಲಿದೆ ಎಂಬ ವಿಶ್ವಾಸವಿದೆ. ಜನರ ಖಾತೆಗೆ ಹಣ ವರ್ಗಾಯಿಸುವ ಬಗ್ಗೆ ಪ್ರಸ್ತಾಪಿಸಿರುವ ಹಲವರೊಂದಿಗೆ ನಾನು ಚರ್ಚೆ ನಡೆಸಿದ್ದೇನೆ. ಈ ಎಲ್ಲಾ ಸಲಹೆಗಳ ಕುರಿತು ಪ್ರಧಾನಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com