ಭಾರತಕ್ಕೆ ವೆಂಟಿಲೇಟರ್: ಕೊರೋನಾ ವಿರುದ್ಧದ ಹೋರಾಟಕ್ಕೆ ಅಮೆರಿಕ ಸ್ನೇಹದಿಂದ ಹೆಚ್ಚಿನ ಬಲ: ಪ್ರಧಾನಿ ಮೋದಿ

ನವದೆಹಲಿ: ಭಾರತದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಮೆರಿಕದ ಸ್ನೇಹದಿಂದ ಹೆಚ್ಚಿನ ಬಲ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಮೆರಿಕ ಸಾಥ್ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವೆಂಟಿಲೇಟರ್ ಗಳನ್ನು ರವಾನೆ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಧನ್ಯವಾದಗಳು, ಡೊನಾಲ್ಡ್ ಟ್ರಂಪ್ ಈ ಸಾಂಕ್ರಾಮಿಕದ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ. ಇಂತಹ ಸಾಂಕ್ರಾಮಿಕ ಸಮಯದಲ್ಲಿ, ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವುದು ಮತ್ತು ನಮ್ಮ ಜಗತ್ತನ್ನು ಆರೋಗ್ಯಕರವಾಗಿ ಮತ್ತು COVID-19 ನಿಂದ ಮುಕ್ತವಾಗಿಸಲು ಸಾಧ್ಯವಾದಷ್ಟು ಒಗ್ಗೂಡಿ ಕಾರ್ಯನಿರ್ವಹಿಸುವುದು ಯಾವಾಗಲೂ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಅಮೆರಿಕ ನಡೆ ಭಾರತ-ಅಮೇರಿಕಾ ಸ್ನೇಹಕ್ಕೆ ಹೆಚ್ಚಿನ 'ಶಕ್ತಿ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
Thank you @POTUS @realDonaldTrump.
This pandemic is being fought collectively by all of us. In such times, it’s always important for nations to work together and do as much as possible to make our world healthier and free from COVID-19.
More power to
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


