ಮಧ್ಯ ಪ್ರದೇಶದಲ್ಲಿ ಲಾರಿ ಪಲ್ಟಿಯಾಗಿ ಆರು ವಲಸೆ ಕಾರ್ಮಿಕರು ಸಾವು

ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯ ಬಂಡಾ ಪಟ್ಣಣ ಸಮೀಪ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಾಗರ್: ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯ ಬಂಡಾ ಪಟ್ಣಣ ಸಮೀಪ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಲಾರಿ ಅಪಘಾತದಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ 6 ಕಾರ್ಮಿಕರು ಮೃತಪಟ್ಟಿದ್ದು, 16 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಂಡಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಸಿಂಘೈ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಈ ವಲಸೆ ಕಾರ್ಮಿಕರು ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಉತ್ತರ ಪ್ರದೇಶದಲ್ಲಿ ಕಾರ್ಮಿಕರು ತೆರಳುತ್ತಿದ್ದ ಲಾರಿ ಅಪಘಾತಕ್ಕಿಡಾಗಿ 24 ಕಾರ್ಮಿಕರು ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com