ಭಾರತೀಯ ಕಿಸಾನ್ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ
ದೇಶ
ಭಾರತೀಯ ಕಿಸಾನ್ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಅಮೇಥಿ: ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮಿಶ್ರಾ ಅವರು ಮೋಟರ್ ಸೈಕಲ್‍ನಲ್ಲಿ ತಮ್ಮ ಮನೆಗೆ ಹೋಗುತ್ತಿದ್ದಾಗ ಮತ್ತೊಂದು ಮೋಟರ್ ಸೈಕಲ್‍ನಲ್ಲಿ ಬಂದ ಅಪರಾಧಿಗಳು ಅವರನ್ನು ಅಡ್ಡಗಟ್ಟಿ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

