56 ದಿನಗಳ ನಂತರ ಕೇರಳದಲ್ಲಿ ಬಸ್ ಸಂಚಾರ ಆರಂಭ, ಅಂತರ್ ಜಿಲ್ಲಾ ಪ್ರಯಾಣಕ್ಕೂ ಅನುಮತಿ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಮಾರ್ಚ್ 25ರಂದು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ಪರಿಣಾಮ 56 ದಿನಗಳ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ಬಸ್ ಸಂಚಾರ ಆರಂಭಿಸಿದ್ದು, ಅಂತರ್ ಜಿಲ್ಲಾ ಪ್ರಯಾಣಕ್ಕೂ ಅನುಮತಿ ನೀಡಲಾಗಿದೆ.
ಕೇರಳ ಸಾರಿಗೆ ಬಸ್
ಕೇರಳ ಸಾರಿಗೆ ಬಸ್

ತಿರುವನಂತಪುರಂ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಮಾರ್ಚ್ 25ರಂದು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ಪರಿಣಾಮ 56 ದಿನಗಳ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ಬಸ್ ಸಂಚಾರ ಆರಂಭಿಸಿದ್ದು, ಅಂತರ್ ಜಿಲ್ಲಾ ಪ್ರಯಾಣಕ್ಕೂ ಅನುಮತಿ ನೀಡಲಾಗಿದೆ.

ಲಾಕ್ ಡೌನ್  4.0 ಮಾರ್ಗಸೂಚಿಗಳ ಪ್ರಕಾರ, ಬೆಳಗ್ಗೆ 7ರಿಂದ ಸಂಜೆ 7 ರ ವರೆಗೆ ಮಾತ್ರ ಬಸ್ ಸಂಚರಿಸಲಿದ್ದು, 1850 ಬಸ್ ಗಳು ಅಂತರ್ ಜಿಲ್ಲಾ ಪ್ರಯಾಣಕ್ಕೆ ಸಿದ್ಧವಾಗಿವೆ.

ಬಸ್ ಸಂಚಾರ ಆರಂಭವಾಗಿದ್ದರೂ ಕೊರೋನಾ ಭಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬರುತ್ತಿಲ್ಲ. ಆದಾಗ್ಯೂ, ಕೆಲವು ಬಸ್‌ಗಳಲ್ಲಿ ಜನಸಂದಣಿ ಕಳವಳಕ್ಕೆ ಕಾರಣವಾಗಿದ್ದು, ಲಾಕ್‌ಡೌನ್ ಮಾರ್ಗಸೂಚಿಗಳ ಪ್ರಕಾರ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ.

ತಿರುವನಂತಪುರಂ ಜಿಲ್ಲೆಯಲ್ಲಿ ಹೆಚ್ಚು ಬಸ್ ಗಳು ಸಂಚರಿಸಿದ್ದು, ಬಸ್ಸಿನಲ್ಲಿ ಹೆಚ್ಚಿನ ಪ್ರಯಾಣಿಕರಿದ್ದರು. ಪ್ರಯಾಣಿಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮುಖವಾಡಗಳನ್ನು ಧರಿಸಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com