ಜಮ್ಮು-ಕಾಶ್ಮೀರ: ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆ ಸಹಚರ್ಯ ಹೊಂದಿದ್ದ ನಾಲ್ವರ ಬಂಧನ

ಲಷ್ಕರ್ ಎ-ತೊಯ್ಬಾ ಉಗ್ರಗಾಮಿ ಸಂಘಟನೆಯೊಂದಿಗೆ ಸಹಚರ್ಯ ಹೊಂದಿದ್ದ ನಾಲ್ಕು ಮಂದಿಯನ್ನು ಭದ್ರತಾ ಪಡೆ ಯೋಧರು ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಲಷ್ಕರ್ ಎ-ತೊಯ್ಬಾ ಉಗ್ರಗಾಮಿ ಸಂಘಟನೆಯೊಂದಿಗೆ ಸಹಚರ್ಯ ಹೊಂದಿದ್ದ ನಾಲ್ಕು ಮಂದಿಯನ್ನು ಭದ್ರತಾ ಪಡೆ ಯೋಧರು ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಿದ್ದಾರೆ.

ಲಷ್ಕರ್ ಎ ತೊಯ್ಬಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ನಾಲ್ವರನ್ನು ಪೊಲೀಸರು ಬದ್ಗಾಮ್ ಜಿಲ್ಲೆಯಲ್ಲಿ ಬಂಧಿಸಿ ಅವರ ಬಳಿಯಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಬಂಧಿತರನ್ನು ವಸೀಮ್ ಗಣಿ, ಫಾರೂಕ್ ಅಹ್ಮದ್ ದಾರ್, ಮೊಹಮ್ಮದ್ ಯಾಸಿನ್ ಮತ್ತು ಅಜರುದ್ದೀನ್ ಮಿರ್ ಎಂದು ಗುರುತಿಸಲಾಗಿದೆ. ಇವರು ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಉಗ್ರರಿಗೆ ತಾತ್ವಿಕ ನೆರವು ಮತ್ತು ಆಶ್ರಯದ ನೆರವು ನೀಡುತ್ತಿದ್ದರು ಎಂದು ಪೊಲೀಸ್ ದಾಖಲೆಗಳು ಹೇಳುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com