ಅಶೋಕ್ ಚವಾಣ್
ದೇಶ
ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್ ಗೆ ಕೊರೋನಾ ಸೋಂಕು
ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಆವರ ಸ್ಯಾಂಪಲ್ ಪರೀಕ್ಷೆ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.
ಮುಂಬೈ: ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಆವರ ಸ್ಯಾಂಪಲ್ ಪರೀಕ್ಷೆ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.
ಕೆಲ ದಿನಗಳ ಹಿಂದೆ ಅವರಿಗೆ ಸೋಂಕು ತಗುಲಿದೆ. ಇದೀಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ಹೇಗೆ ತಗುಲಿತು ಎಂಬುದು ನಿಖರವಾಗಿ ತಿಳಿದಿಲ್ಲ. ಮುಂಬೈ ಮತ್ತು ಅವರ ಊರಾದ ಮರಾಠವಾಡ ಮಧ್ಯೆ ಅವರು ಆಗಾಗ ಓಡಾಟ ನಡೆಸುತ್ತಿದ್ದರೆನ್ನಲಾಗಿದೆ. ಈ ವೇಳೆ ಅವರಿಗೆ ಸೋಂಕು ತಗುಲಿರಬಹುದು ಎನ್ನಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ