ಎಚ್ಐವಿ ಪೀಡಿತ ವ್ಯಕ್ತಿಗೆ ಕೊರೋನಾ ವೈರಸ್, ಆರೇ ದಿನದಲ್ಲಿ ಗುಣಮುಖ!

ಲಖನೌ: ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಎಚ್ಐವಿ ಪೀಡಿತ ವ್ಯಕ್ತಿಯೊಬ್ಬರು ಮಹಾಮಾರಿಯಿಂದ ಆರೇ ದಿನದಲ್ಲಿ ಗುಣಮುಖರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕೊರೋನಾ ವೈರಸ್ ಸೋಂಕಿತ 34 ವರ್ಷದ ಎಚ್ಐವಿ ಪೀಡಿತ ವ್ಯಕ್ತಿಗೆ ಲಖನೌನ ಕಿಂಗ್ ಜಾರ್ಜ್ ವೈದ್ಯಕೀಯ ವಿವಿ(ಕೆಜೆಎಂಯು)ಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ.
ಈ ವ್ಯಕ್ತಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರಿಂದ ಕೆಜೆಎಂಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ರೋಗಿ ತನಗೆ ಎಚ್ಐವಿ ಪಾಸಿಟಿವ್ ಇರುವುದನ್ನು ತಿಳಿಸಿದ್ದಾರೆ. ಬಳಿಕ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ.
ಎಚ್‌ಐವಿ ಮತ್ತು ಕೊರೋನಾ ಪಾಸಿಟಿವ್ ಎರಡೂ ಇರುವ ಮೊದಲ ಪ್ರಕರ ಇದಾಗಿದೆ. ಎಚ್‌ಐವಿ ರೋಗಿಗಳಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಆದರೂ ಅವರು ಕೇವಲ ಆರು ದಿನಗಳಲ್ಲಿ ಚೇತರಿಸಿಕೊಂಡಿರುವುದು ವೈದ್ಯರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಕೆಜಿಎಂಯು ಕುಲಪತಿ, ಪ್ರೊಫೆಸರ್ ಎಂ.ಎಲ್.ಬಿ. ಭಟ್ ಅವರು ಹೇಳಿದ್ದಾರೆ.
ಅಪಘಾತದಲ್ಲಿ ಈ ರೋಗಿಯ ತಲೆಗೆ ಗಾಯವಾಗಿದೆ ಮತ್ತು ಗಾಯದಿಂದಾಗಿ ಸ್ವಲ್ಪ ಸಮಯ ಮಾನಸಿಕವಾಗಿ ಕುಗ್ಗಿಹೋಗಿದ್ದರು. ಆದರೆ ಈಗ ಅವರು ಕೊವಿಡ್-19 ನಿಂದ ಚೇತರಿಸಿಕೊಂಡಿದ್ದು, ಮಂಗಳವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಮತ್ತು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಿಲಾಗಿದೆ ಎಂದು ಭಟ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


