ಕೊರೋನಾ ಎಫೆಕ್ಟ್: ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 45,000 ಭಾರತೀಯರು ತವರಿಗೆ ವಾಪಸ್

ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 45,000ಕ್ಕೂ ಹೆಚ್ಚು ಭಾಹರತೀಯರನ್ನು ಮರಳಿ ತವರಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 45,000ಕ್ಕೂ ಹೆಚ್ಚು ಭಾಹರತೀಯರನ್ನು ಮರಳಿ ತವರಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. 

ಗುರುವಾರ ಮಧ್ಯಾಹ್ನದವರೆಗೂ ಒಟ್ಟು 45,216 ಮಂದಿ ಭಾರತೀಯರನ್ನು ಮರಳಿ ಕರೆತರಲಾಗಿದೆ. ಅವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಮತ್ತು 5,107 ವೃತ್ತಿಪರರು ಸೇರಿದ್ದಾರೆ. ಜೂನ್.13ರವರೆಗೆ ಒಂದು ಲಕ್ಷ ಜನರನ್ನು ಭಾರತಕ್ಕೆ ಕರೆ ತರಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು ಹೇಳಿದ್ದಾರೆ. 

ಲ್ಯಾಟಿನ್ ಅಮೆರಿಕಾ, ಕೆರಿಬಿಯನ್, ಆಫ್ರಿಕಾ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಉಳಿದುಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತಕ್ಕೆ ಹಾರಾಟ ನಡೆಸುತ್ತಿರುವ ವಿದೇಶಿ ವಿಮಾನಗಳ ಸಹಾಯ ಪಡೆದುಕೊಳ್ಳುವ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಸುಮಾರು 5,.000 ಭಾರತೀಯರು ನೇಪಾಳ ಮತ್ತು ಬಾಂಗ್ಲಾದೇಶದಿಂದ ಭೂಗಡಿಯ ಮೂಲಕ ಮರಳಿದ್ದಾರೆಂದು ದೃಢಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com