ಮಹಾರಾಷ್ಟ್ರ: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಇಬ್ಬರ ಶವ ಪತ್ತೆ, ಆತ್ಮಹತ್ಯೆ ಶಂಕೆ

ಮಹಾರಾಷ್ಟ್ರದ  ಸರ್ಕಾರಿ ಇಂಜಿನೀಯರ್ ಕಾಲೇಜಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮತ್ತೊಬ್ಬ ವ್ಯಕ್ತಿ ಶವ ಪತ್ತೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಂದ್ರಾಪುರ್: ಮಹಾರಾಷ್ಟ್ರದ  ಸರ್ಕಾರಿ ಇಂಜಿನೀಯರ್ ಕಾಲೇಜಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮತ್ತೊಬ್ಬ ವ್ಯಕ್ತಿ ಶವ ಪತ್ತೆಯಾಗಿದೆ.

ಶನಿವಾರ ಬೆಳಗ್ಗೆ  ಇಬ್ಬರು ಪುರುಷರ ಶವ ಪತ್ತೆಯಾಗಿದೆ ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸರ್ಕಾರಿ ಎಂಜಿನೀಯರಿಂಗ್ ಕಾಲೇಜಿನ ಕೊಠಡಿಯಲ್ಲಿ ಚಂದ್ರಾಪುರ ನಗರದ 30 ವರ್ಷದ ವ್ಯಕ್ತಿ  ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗಪುರದಿಂದ ಆಗಮಿಸಿದ್ದ ಆತನನ್ನು ಆರೋಗ್ಯಾಧಿಕಾರಿಗಳು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದ್ದರು. ಆದರೆ ಆತ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದು ಇನ್ನೂ ತಿಳಿದು ಬಂದಿಲ್ಲ.

ಮತ್ತೊಂದು ಪ್ರಕರಣದಲ್ಲಿ  40 ವರ್ಷದ ವ್ಯಕ್ತಿ ಮಧ್ಯಪ್ರದೇಶದಿಂದ ಆಗಮಿಸಿ ದ್ದ ವ್ಯಕ್ತಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಈತ ಕುಟುಂಬದ ಜೊತೆ ವಾಸವಾಗಿದ್ದ. ವಿಶ್ರಾಂತಿ ತೆಗೆದುಕೊಳ್ಳುವುದಾಗಿ ಹೇಳಿ ಹೋದ ವ್ಯಕ್ತಿ ಎಷ್ಟು ಹೊತ್ತಾದರೂ ವಾಪಸ್ ಬಾರಲಿಲ್ಲ, ನಂತರ ಈತ ಆತ್ಮಹತ್ಯಗೆ ಶರಣಾಗಿರುವುದು ಕಂಡು ಬಂದಿದೆ. ಇಬ್ಬರು ವ್ಯಕ್ತಿಗಳ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿದ್ದು ಪರೀಕ್ಷೆಗೆ ಕಳುಹಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com