ಕೊರೋನಾ ಹೊರತಾಗಿಯೂ ಮತದಾನ ಮಾಡಿದ ಬಿಹಾರ ಜನತೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ. 44.51ರಷ್ಟು ಮತದಾನವಾಗಿದೆ.....
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ಫೋರ್ಬೆಸ್ ಗಂಜ್: ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ. 44.51ರಷ್ಟು ಮತದಾನವಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದ ಹೊರತಾಗಿಯೂ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ಬಿಹಾರ ಜನತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. 

ಇಂದು ಬಿಹಾರದ ಫೋರ್ಬೆಸ್ ಗಂಜ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಹಾರ ನಮ್ಮ ದೇಶ ಮಾತ್ರವಲ್ಲ, ಇಡೀ ಜಗತ್ತಿಗೆ ಸಂದೇಶವನ್ನು ನೀಡುತ್ತಿದೆ. ಕೊರೋನಾ ಕಾಲದಲ್ಲಿ, ಜನರು ಮತ ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಶಕ್ತಿ ಮತ್ತು ಇದು ಪ್ರತಿ ಬಿಹಾರಿಯ ಭಕ್ತಿ. ಇದು ಭಾರತೀಯರ ಮನಸ್ಸಿನಲ್ಲಿ ಪ್ರಜಾಪ್ರಭುತ್ವ ಎಷ್ಟು ಆಳವಾಗಿ ನೆಲೆಗೊಂಡಿದೆ ಎಂಬುದನ್ನು ತೋರಿಸುತ್ತದೆ ಎಂದರು.

ಇದಕ್ಕು ಮುನ್ನ ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಮನವಿ ಮಾಡಿದ್ದರು.

ಪ್ರಜಾಪ್ರಭುತ್ವದ ಹಬ್ಬ' ಮತದಾನ ದಿನವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದ ಪ್ರಧಾನಿ, ಮತದಾನದ ವೇಳೆ ಮುಖಗವಸು ಕಡ್ಡಾಯವಾಗಿ ಧರಿಸುವುದು ಮತ್ತು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ಇಂದಿನ ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಎಲ್ಲಾ ಮತದಾರರಿಗೆ ನನ್ನ ಮನವಿಯೆಂದರೆ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಈ ಹಬ್ಬವನ್ನು ಯಶಸ್ವಿಗೊಳಿಸಬೇಕು. ಸಾಂಕ್ರಾಮಿಕದ ಈ ಸಮಯದಲ್ಲಿ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ಮುಖಗವಸು ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com