ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾಳಿ ಪೂಜೆ, ದೀಪಾವಳಿಗೆ ಪಟಾಕಿ ನಿಷೇಧಿಸಿದ ಪಶ್ಚಿಮ ಬಂಗಾಳ 

ಮಾರಕ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಕಾಳಿ ಪೂಜೆ ಮತ್ತು ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ.

ಕೋಲ್ಕತಾ: ಮಾರಕ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಕಾಳಿ ಪೂಜೆ ಮತ್ತು ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ.

ಕಾಳಿ ಪೂಜೆ ಮತ್ತು ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಮಂಗಳವಾರ ಹೇಳಿದ್ದಾರೆ.

ಕೋವಿಡ್-19 ರೋಗಿಗಳಿಗೆ ಅಪಾಯಕಾರಿಯಾದ ವಾಯು ಮಾಲಿನ್ಯವನ್ನು ತಡೆಯಲು ಕಾಳಿ ಪೂಜಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಪಟಾಕಿ ಸಿಡಿಸಲು ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ರಾಜಸ್ಥಾನ ಸರ್ಕಾರ ಸಹ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು. ಕೋವಿಡ್ 19 ಸೋಂಕಿಗೆ ತುತ್ತಾದ ರೋಗಿಗಳಲ್ಲಿ ಉಸಿರಾಟದ ಸಮಸ್ಯೆ ಸಾಮಾನ್ಯವಾಗಿರುವುದರಿಂದ ಅವರ ಆರೋಗ್ಯ ರಕ್ಷಣೆ ಮತ್ತು ಸಾರ್ವಜನಿಕರಿಗೆ ಅನಾರೋಗ್ಯ ತಂದೊಡ್ಡಲಿರುವ ಹಿನ್ನೆಲೆಯಲ್ಲಿ ಸಿಡಿಮದ್ದು(ಪಟಾಕಿ) ಮಾರಾಟ ನಿಷೇಧಿಸಲಾಗಿದೆ ಎಂದು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com