ಅರ್ನಬ್‌ ಬಂಧನ ತುರ್ತುಪರಿಸ್ಥಿತಿ ನೆನಪಿಸುತ್ತಿದೆ: ಗೃಹ ಸಚಿವ ಅಮಿತ್ ಶಾ

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 
ಅಮಿತ್ ಶಾ
ಅಮಿತ್ ಶಾ
Updated on

ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ಪ್ರಕರಣ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕಾಂಗ್ರೆಸ್ ಮತ್ತು ಅದರ ಮೈತ್ರಿಗಳು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನು ನಾಚಿಕೆಪಡುವಂತೆ ಮಾಡಿವೆ. ರಿಪಬ್ಲಿಕ್ ಟಿವಿ ಮತ್ತು ಗೋಸ್ವಾಮಿ ವಿರುದ್ಧ ಅಧಿಕಾರವನ್ನು ಬಳಸಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ 4ನೇ ಅಂಗದ ಮೇಲೆ ದಾಳಿ ನಡೆಸಲಾಗಿದೆ. ಇದು ತುರ್ತುಪರಿಸ್ಥಿತಿಯನ್ನು ನಮಗೆ ನೆನಪಿಸುತ್ತಿದೆ. ಮುಕ್ತ ಪತ್ರಿಕೆಯ ಮೇಲಿನ ದಾಳಿಯನ್ನು ನಾವು ಖಂಡಿಸಬೇಕು ಮತ್ತು ವಿರೋಧಿಸಬೇಕು” ಎಂದು ಹೇಳಿದ್ದಾರೆ. 

ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮಾಡಿ, “ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಪತ್ರಿಕೋದ್ಯಮವನ್ನು ಎದುರಿಸುವ ರೀತಿ ಇದಲ್ಲ. ಇದು ನಮಗೆ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕೆಯ ಮೇಲೆ ನಡೆಯುತ್ತಿದ್ದ ದಾಳಿಯನ್ನು ನೆನಪಿಸಿಕೊಡುತ್ತದೆ” ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com