ಪುಲ್ವಾಮ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್'ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಿದ ಎಂದು ತಿಳಿದುಬಂದಿದೆ. 

ಪಾಂಪೋರ್'ನ ಲಾಲ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದವು. ಇಂದು ಬೆಳಿಗ್ಗೆ ಕೂಡ ಕಾರ್ಯಾಚರಣೆ ಮುಂದವರೆದಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. 

ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ಈ ನಡುವೆ ಮತ್ತೋರ್ವ ಉಗ್ರ ಭದ್ರತಾಪಡೆಗಳಿಗೆ ಶರಣಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

ಕಾರ್ಯಾಚರಣೆ ವೇಳೆ ಇಬ್ಬರು ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗದ ಮಧ್ಯೆ ಓರ್ವ ನಾಗರೀಕ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com