ಜಮ್ಮು-ಕಾಶ್ಮೀರ: ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ, ಮೂವರು ಉಗ್ರರು ಹತ್ಯೆ 

ಜಮ್ಮು ಮತ್ತು ಕಾಶ್ಮೀರದ ಮಚಿಲ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಒಳನುಸುಳುಕೋರರನ್ನು ತಡೆಗಟ್ಟುವ ಪ್ರಯತ್ನದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಯೋಧರು
ಭಾರತೀಯ ಯೋಧರು
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಒಳನುಸುಳುಕೋರರನ್ನು ತಡೆಗಟ್ಟುವ ಪ್ರಯತ್ನದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ವಲಯದಲ್ಲಿನ ನಿಯಂತ್ರಣ ರೇಖೆಯಿಂದ ದೇಶದೊಳಗೆ ನುಗ್ಗಲು ಉಗ್ರರು ರಾತ್ರಿಯಲ್ಲಾ ಪ್ರಯತ್ನ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ಬಗ್ಗೆ ವಿವರ ನೀಡಿದ ರಕ್ಷಣಾ ವಕ್ತಾರ ರಾಜೇಶ್ ಕಲಿಯಾ, ಭಾನುವಾರ ಮುಂಜಾನೆ 1 ಗಂಟೆಗೆ ಭದ್ರತಾ ಪಡೆಗಳು ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಚಲನೆಯನ್ನು ಗಮನಿಸಿವೆ. ಶರಣಾಗುವಂತೆ ಭದ್ರತಾ ಪಡೆಗಳು ಸೂಚಿಸಿದರೂ ಒಳನುಸುಳುಕೋರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ.ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಗುಂಡಿನ ಚಕಮಕಿ ನಡೆದು, ಘಟನೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.

ಹತನಾದ ಉಗ್ರನ ಬಳಿ ಇದ್ದ ಒಂದು ಎಕೆ ರೈಫಲ್ ಮತ್ತು ಎರಡು ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ .ಗುಂಡಿನ ಚಕಮಕಿಯಲ್ಲಿ ಕಾನ್ಸ್ ಟೇಬಲ್ ಸುದೀಪ್ ಸರ್ಕಾರ್  ಹುತಾತ್ಮರಾಗಿದ್ದಾರೆ. ಮುಂದುವರೆದ ಗುಂಡಿನ ಚಕಮಕಿಯಲ್ಲಿ ಇನ್ನೂ ಇಬ್ಬರು ಹತರಾಗಿದ್ದಾರೆ. ಸೇನಾಧಿಕಾರಿ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಕಲಿಯಾ ಹೇಳಿದ್ದಾರೆ. 

ಕಾರ್ಯಾಚರಣೆ ಮುಂದುವರೆದಿದ್ದು, ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com