ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಬೆಂಕಿ ಹಚ್ಚಿದ ಯುವಕ! 

ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಲೈಂಗಿಕ ಕ್ರಿಯೆಗೆ ಒಪ್ಪದ 15 ವರ್ಷದ ಬಾಲಕಿಯನ್ನು ಆಕೆಯ ಪ್ರೇಮಿ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ

ಕೃಷ್ಣ ಗುಪ್ತ (21) ಎಂಬಾತ ಈ ದುಷ್ಕೃತ್ಯ ಎಸಗಿದ ವ್ಯಕ್ತಿಯಾಗಿದ್ದು ಆತನನ್ನು ಬಂಧಿಸಲಾಗಿದೆ.

ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ವಾರಾಣಸಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ

ಪೊಲೀಸ್ ಠಾಣಾ ಎಸ್ ಹೆಚ್ಒ ಅನಿಲ್ ಚಂದ್ರ ತಿವಾರಿ ಈ ಬಗ್ಗೆ ಮಾತನಾಡಿದ್ದು, ಯುವತಿಯ ತಂದೆಯ ದೂರನ್ನು ಆಧರಿಸಿ ಆರೋಪಿಯ ವಿರುದ್ಧ ಐಪಿಸಿ, ಎಸ್ ಸಿ/ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೈಂಗಿಕ ಕ್ರಿಯೆ ನಡೆಸಲು ನಿರಂತರವಾಗಿ ನಿರಾಕರಿಸಿದ್ದ ಕಾರಣ ತಮ್ಮ ಮನೆಯಿಂದ ಮಗಳನ್ನು ಎಳೆದೊಯ್ದ ಆರೋಪಿ ಆಕೆಯನ್ನು ಬೆಂಕಿ ಹಚ್ಚಿ ಸಾಯಿಸಿದ್ದಾನೆ ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com