ಕುಪ್ವಾರದಲ್ಲಿ ಒಳನುಸುಳುವಿಕೆ ಯತ್ನ ವಿಫಲ: ಭದ್ರತಾ ಪಡೆಗಳಿಂದ ಓರ್ವ ಉಗ್ರ ಹತ್ಯೆ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಭಾನುವಾರ ಮುಂಜಾನೆ ಭದ್ರತಾ ಪಡೆಗಳು ಉಗ್ರರ ಭಾರೀ ಒಳನುಸಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on: 

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಭಾನುವಾರ ಮುಂಜಾನೆ ಭದ್ರತಾ ಪಡೆಗಳು ಉಗ್ರರ ಭಾರೀ ಒಳನುಸಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಭಾನುವಾರ ಮುಂಜಾನೆ 1 ಗಂಟೆಗೆ ಭದ್ರತಾ ಪಡೆಗಳು ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಚಲನೆಯನ್ನು ಗಮನಿಸಿವೆ ಎಂದು ಕರ್ನಲ್ ರಾಜೇಶ್ ಕಾಲಿಯಾ ಯುಎನ್‌ಐಗೆ ತಿಳಿಸಿದ್ದಾರೆ.

ಶರಣಾಗುವಂತೆ ಭದ್ರತಾ ಪಡೆಗಳು ಸೂಚಿಸಿದರೂ ಒಳನುಸುಳುಕೋರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಗುಂಡಿನ ಚಕಮಕಿ ನಡೆದು, ಘಟನೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅವರು ಹೇಳಿದ್ದಾರೆ.  ಕಾರ್ಯಾಚರಣೆಯಲ್ಲಿ 1 ಎಕೆ 47 ರೈಫಲ್ ಮತ್ತು 2 ಬ್ಯಾಗ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾನ್ಸೇಬಲ್ ಹುತಾತ್ಮ
ಇನ್ನು ಇದೇ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದ್ದು, ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಸುದೀಪ್ ಸರ್ಕಾರ ಎಂಬ ಪೇದೆ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು, ಸುತ್ತಮುತ್ತಲ ಗ್ರಾಮದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com