ಬಿಹಾರ ಚುನಾವಣೆ: ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆ, ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ಗೆ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ.
ತೇಜಸ್ವಿ ಯಾದವ್
ತೇಜಸ್ವಿ ಯಾದವ್

ಪಾಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ.

ಲಾಲ್ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ಆರಂಭಿಕ ಮುನ್ನಡೆ ಸಾಧಿಸಿದ್ದು, ತೇಜಸ್ವಿ ಯಾದವ್ ರ ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ಮೈತ್ರಿಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಒಟ್ಟು 243 ಕ್ಷೇತ್ರಗಳ ಪೈಕಿ ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟ್  ಬಂಧನ್ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನು ಈ ಚುನಾವಣೆಯಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ರ ಮಗ ಚಿರಾಗ್ ಪಾಸ್ವಾನ್ ರ ಎಲ್ ಜೆಪಿ 5 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದಾರೆ. ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಆ ಮೂಲಕ ತ್ರಿಕೋನ ಸ್ಪರ್ಧೆ ಎಂದು ಹೇಳಲಾಗುತ್ತಿದ್ದ ಬಿಹಾರ ಚುನಾವಣೆಯಲ್ಲಿ ಇದೀಗ ಎನ್ ಡಿಎ ಮೈತ್ರಿಕೂಟ ಮತ್ತು ಮಹಾಘಟ್ ಬಂಧನ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com