ದೇಶ
ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಹಾಯಕ ಉಪಾಧ್ಯಕ್ಷ ಬಂಧನ
ನಕಲಿ ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಇಂದು ಬೆಳಿಗ್ಗೆ 7: 40 ಕ್ಕೆ ಬಂಧಿಸಿದ್ದಾರೆ.
ಮುಂಬೈ: ನಕಲಿ ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಇಂದು ಬೆಳಿಗ್ಗೆ 7: 40 ಕ್ಕೆ ಬಂಧಿಸಿದ್ದಾರೆ.
ನಕಲಿ ಟಿಆರ್‌ಪಿ ಪ್ರಕರಣದಲ್ಲಿಘನಶ್ಯಾಮ್ ವಿರುದ್ಧಪ್ರಕರಣ ದಾಖಲಿಸಲಾಗಿದೆ. ಗಮನಿಸಬೇಕಾದ ಅಂಶವೆಂದರೆ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಪ್ರಸ್ತುತ 7 ನೇ ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕಂಪನಿಯು ಅವರಿಗೆ ವಹಿಸಿಕೊಟ್ಟ ಗೌಪ್ಯ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪವಿದ್ದು ವಿಧ ಟಿವಿ ಚಾನೆಲ್ ನಡುವೆ ಳಾಭಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ವಿವಿಧ ಜಾಹೀರಾತುದಾರರು ಮತ್ತು ಅವರ ಏಜೆನ್ಸಿಗಳಿಗೆ ನಷ್ಟವಾಗಿದೆ ಎಂದು ಆರೋಪ ಮಾಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ