ಪರಸ್ಪರರ ಸೌರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು: ಪಾಕ್, ಚೀನಾಕ್ಕೆ ಖಡಕ್ ಸಂದೇಶ ರವಾನಿಸಿದ ಮೋದಿ

ಶಾಂಘೈ ಸಹಕಾರ ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.

ಪೂರ್ವ ಲಡಾಖ್ ನಲ್ಲಿ ಸಿನೋ- ಭಾರತ ಗಡಿ ವಿವಾದ, ಭಾರತ ವಿರುದ್ಧ ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಕಾಶ್ಮೀರ ವಿವಾದವನ್ನು ಅಂತಾರಾಷ್ಟ್ರೀಯ ವಿಚಾರವಾಗಿಸುವ ಪಾಕ್  ಪ್ರಯತ್ನದ ಹಿನ್ನೆಲೆಯಲ್ಲಿ ಎಂಟು ಸದಸ್ಯರ ಶಾಂಘೈ ಸಹಕಾರ ಸಂಘಟನೆಯ ವರ್ಚುಯಲ್ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ-ಜಿನ್ ಪಿಂಗ್ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಸಮ್ಮುಖದಲ್ಲಿಯೇ ನರೇಂದ್ರ ಮೋದಿ ಈ ರೀತಿಯ ಸಂದೇಶ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನೇತೃತ್ವದಲ್ಲಿ ನಡೆದ ಶೃಂಗಸಭೆಯಲ್ಲಿ ಇತರ ರಾಷ್ಟ್ರಗಳ ಮುಖಂಡರು ಪಾಲ್ಗೊಂಡಿದ್ದರು.

ರಾಷ್ಟ್ರಗಳ ನಡುವೆ ಸಂಪರ್ಕತೆ ಬಲಪಡಿಸುವಿಕೆಯಲ್ಲಿ ಭಾರತ ಪಾಲ್ಗೊಳ್ಳುವಿಕೆ ಬಗ್ಗೆ ಮಾತನಾಡಿದ ಪ್ರಧಾನಿ, ಪರಸ್ಪರರ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮೂಲಕ ಇದರಲ್ಲಿ ಮುಂದುವರೆಯುವುದಾಗಿ ತಿಳಿಸಿದರು. 

ಶಾಂಘೈ ಸಹಕಾರ ಸಂಘಟನೆ ಸಿದ್ಧಾಂತಗಳೊಂದಿಗೆ ಯಾವಾಗಲೂ ಕೆಲಸ ಮಾಡಲು ಭಾರತ ದೃಢ ನಿಶ್ಚಯ ಹೊಂದಿದೆ. ಆದರೆ, ಅನಗತ್ಯವಾಗಿ ದ್ವಿಪಕ್ಷೀಯ ವಿಚಾರಗಳನ್ನು ಪದೇ ಪದೇ  ಉಲ್ಲೇಖಿಸುವ ಮೂಲಕ ಶಾಂಘೈ ಸಹಕಾರ ಸಂಘಟನೆಯ ಉತ್ಸಾಹವನ್ನು ಮೀರುತ್ತಿರುವುದು ದುರದೃಷ್ಟಕರ ವಿಚಾರ ಎಂದು ನರೇಂದ್ರ ಮೋದಿ ಪಾಕಿಸ್ತಾನ  ವಿರುದ್ಧ ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com