ಪಟಾಕಿ ನಿಷೇಧಕ್ಕೆ 'ಹೈ' ಆದೇಶ: ಜೀವ ರಕ್ಷಣೆ ಅತಿಮುಖ್ಯ ಎಂದ ಸುಪ್ರೀಂ ಕೋರ್ಟ್, ಮಧ್ಯಪ್ರವೇಶಿಸಲು ನಿರಾಕರಣೆ

ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸುವ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸುವ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

ಪಶ್ಚಿಮ ಬಂಗಾಳದಲ್ಲಿ ಕಾಳಿ ಪೂಜೆಯ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಅಲ್ಲಿನ ಹೈಕೋರ್ಟ್ ನಿರ್ಬಂಧ ವಿಧಿಸಿ, ಕೊರೋನಾ ಪ್ಯಾಂಡಮಿಕ್ ನಡುವೆ ಜೀವಸಂಕುಲದ ಉಳಿವು ಮುಖ್ಯ ಎಂದು ಹೇಳಿತ್ತು.

ನ್ಯಾ.ಡಿ ವೈ ಚಂದ್ರಚೂಡ್ ಹಾಗೂ ನ್ಯಾ.ಇಂದಿರಾ ಬ್ಯಾನರ್ಜಿ ಅವರ ರಜೆ ಪೀಠ ಈ ಆದೇಶ ಹೊರಡಿಸಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಲು ನಿರಾಕರಿಸಿದ್ದು, ಸ್ಥಳೀಯ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಗೆ ಅರಿವು ಇದೆ, ಅಗತ್ಯವಿರುವುದನ್ನು ಮಾಡುವುದಕ್ಕೆ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಗೌತಮ್ ರಾಯ್ ಹಾಗೂ ಬುರ್ರಾಬಜಾಸ್ ಫೈರ್ ವರ್ಕ್ಸ್ ಡೀಲರ್ಸ್ ಅಸೊಸಿಯೇಷನ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ನಾಗರಿಕ ಹಿತಾಸಕ್ತಿಯ ದೃಷ್ಟಿಯಲ್ಲಿ, ಪ್ರಮುಖವಾಗಿ ಹಿರಿಯ ನಾಗರಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಈ ಆದೇಶ ನೀಡಿದೆ. 

ಜಗದ್ಧಾತ್ರಿ ಪೂಜೆ, ಛಾತ್ ಹಾಗೂ ಕಾರ್ತಿಕ ಪೂಜೆ ಸಂದರ್ಭಗಳಲ್ಲಿ ಪಟಾಕಿ ಹೊಡೆಯುವುದನ್ನು ನಿಷೇಧಿಸಿ ಹೈಕೋರ್ಟ್ ಆದೇಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com