ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ

ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ  ಸಭೆ ನಡೆಯಲಿದೆ
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on

ಪಾಟ್ನಾ: ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ  ಸಭೆ ನಡೆಯಲಿದೆ. 

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಇಂದು ನಡೆದ  ಎನ್ ಡಿಎ ಅಂಗಪಕ್ಷಗಳಾದ ಜೆಡಿಯು, ಬಿಜೆಪಿ, ಹೆಚ್ ಎಎಂ ಮತ್ತು ವಿಐಪಿ ಪಕ್ಷದ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನವೆಂಬರ್ 15 ರಂದು ಮಧ್ಯಾಹ್ನ 12-30ಕ್ಕೆ  ಸಭೆ ಆರಂಭವಾಗಲಿದೆ ಎಂದು ನಿತೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಿಜೆಪಿ 74 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಆಡಳಿತಾರೂಢ ಎನ್ ಡಿಎಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಸರಿ ಪಕ್ಷದ ವರಿಷ್ಠರು ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲು ಅನುಮೋದನೆ ನೀಡಿದ್ದಾರೆ. 

ಆಡಳಿತರೂಢ ಎನ್ ಡಿಎ ಪಕ್ಷದ  ಮುಖ್ಯಮಂತ್ರಿ ಅಭ್ಯರ್ಥಿ ಎಂದು ನಿತೀಶ್ ಕುಮಾರ್ ಅವರನ್ನು ಚುನಾವಣಾ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಘೋಷಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com