ನವದೆಹಲಿ: ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈ ಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು ಘೋಷಿಸಿದೆ.
ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಅರುಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪ ಉಸ್ತುವಾರಿಯಾಗಿ ಡಿಕೆ ಅರುಣಾ ಅವರನ್ನು ನೇಮಿಸಲಾಗಿದೆ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ರಾಜ್ಯ ಮುಖಂಡ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.
ರಾಜ್ಯದ ಇನ್ನೊಬ್ಬ ಮುಖಂಡ ನಿರ್ಮಲಕುಮಾರ್ ಸುರಾನಾ ಅವರನ್ನು ನೆರೆಯ ಪುದುಚೇರಿಗೆ ನಿಯೋಜಿಸಲಾಗಿದೆ. ಇದುವರೆಗೆ ರಾಜ್ಯದ ಉಸ್ತುವಾರಿಯಾಗಿದ್ದ ಪಿ.ಮುರುಳೀಧರ ರಾವ್ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ.
Advertisement