ಚಾಚಾ ನೆಹರು 131ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ಪ್ರಧಾನಿ ಮೋದಿ

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 131ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 131ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸುತ್ತಿದ್ದೇನೆಂದು ಹೇಳಿದ್ದಾರೆ. 

ನೆಹರೂ ಅವರೂ 1889ರ ನವೆಂಬರ್ 14 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್'ನಲ್ಲಿ ಜನಿಸಿದ್ದರು. ಮೇ 27, 1964 ರಂದು ವಿಧಿವಶರಾಗಿದ್ದರು. 

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಳಿಕ ಆಗಸ್ಟ್ 15, 1947 ರಂದು ದೇಶದ ಮೊದಲ ಪ್ರಧಾನಮಂತ್ರಿಯಾಗಿದ್ದರು. 

ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯೆಂದು ಆಚರಿಸಲಾಗುತ್ತಿದೆ.

ಮಕ್ಕಳನ್ನು ಅತ್ಯಂತ ಪ್ರೀತಿ ಹಾಗೂ ವಾತ್ಸಲ್ಯದಿಂದ ನೋಡುತ್ತಿದ್ದ ನೆಹರೂ ಅವರನ್ನು ಪ್ರೀತಿಯಿಂದ ಚಾಚಾ ನೆಹರು ಎಂದೇ ಕರೆಯಲಾಗುತ್ತಿದ್ದು. ನೆಹರೂ ಅವರು ಸಾವನ್ನಪ್ಪಿದ ಬಳಿಕ ಅವರ ಜನ್ಮದಿನವನ್ನು ಬಾಲ್ ದಿವಸ್ ಅಥವಾ ಮಕ್ಕಳ ದಿನಾಚರಣೆ ಎಂದು ಆಚರಣೆ ಮಾಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com