ಸಾಂದರ್ಭಿಕ ಚಿತ್ರ
ದೇಶ
ಉತ್ತರ ಪ್ರದೇಶ ಬಿಜೆಪಿ ಹಿರಿಯ ನಾಯಕನ ಪುತ್ರ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣು
ಉತ್ತರ ಪ್ರದೇಶದ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರ ಶನಿವಾರ ಬೆಳಗ್ಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಲಂದ್‌ಶಹರ್: ಉತ್ತರ ಪ್ರದೇಶದ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರ ಶನಿವಾರ ಬೆಳಗ್ಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆವಾರ್ ನಿಂದ ಮೂರು ಬಾರಿ ಶಾಸಕರಾದ ಹೊರಮ್ ಸಿಂಗ್ ಅವರ ಪುತ್ರ ಮಹೇಶ್ ಅವರು ತಮ್ಮ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಶೂಟ್ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತೋರುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ದೂರು ಬಂದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್‌ಪೆಕ್ಟರ್ ಕೊಟ್ವಾಲಿ ಎಂ.ಕೆ. ಉಪಾಧ್ಯಾಯ ಅವರು ಹೇಳಿದ್ದಾರೆ.

