ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಪವಾಡವಾಗ ಬೇಕು ಎಂದ ವೈದ್ಯರು
ಕೋಲ್ಕತಾ: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಪವಾಡವಾಗಬೇಕು ಎಂದು ವೈದ್ಯರು ಹೇಳಿದ್ದಾರೆ.
85 ವರ್ಷದ ಸೌಮಿತ್ರ ಚಟರ್ಜಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪವಾಡ ನಡೆಯದ ಹೊರತು ನಾವು ಏನೂ ಹೇಳಲು ಸಾಧ್ಯವಿಲ್ಲ. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಟಿ ಆಸ್ಪತ್ರೆಯ ಹಿರಿಯ ವೈದ್ಯರು, ಚಟರ್ಜಿ ಅವರ ಪರಿಸ್ಥಿತಿ ನಿಜವಾಗಿಯೂ ಗಂಭೀರ ಮತ್ತು ನಿರ್ಣಾಯಕ ಹಂತದಲ್ಲಿದೆ. ಅವರ ಆಮ್ಲಜನಕದ ಅಗತ್ಯತೆ ಪ್ರಮಾಣ ಹೆಚ್ಚಾಗಿದ್ದು, ಮೂತ್ರಪಿಂಡದಗಳ ಕಾರ್ಯ ಸಂಪೂರ್ಣ ಹದಗೆಟ್ಟಿದೆ. ಗುರುವಾರ ಅವರಿಗೆ ಮೊದಲ ಪ್ಲಾಸ್ನಾ ಥೆರಪಿ ನೀಡಲಾಗಿತ್ತು. ಬುಧವಾರ ಟ್ರಾಕಿಯೊಸ್ಟೊಮಿ ನಡೆಸಲಾಗಿತ್ತು. ಇದಾಗ್ಯೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ಅಕ್ಟೋಬರ್ 6 ರಂದು ಕೋವಿಡ್-19 ಧೃಢವಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ