ಮಹಾರಾಷ್ಟ್ರದಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 2,840 ಹೊಸ ಸೋಂಕು ಪ್ರಕರಣ ದಾಖಲು

ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿದ್ದ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಅಬ್ಬರ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 2,840 ಹೊಸ ಪ್ರಕರಣಗಳು ದಾಖಲಾಗಿವೆ. 
ಕೊರೋನಾ ವೈರಸ್
ಕೊರೋನಾ ವೈರಸ್
Updated on: 

ಮುಂಬೈ: ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿದ್ದ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಅಬ್ಬರ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 2,840 ಹೊಸ ಪ್ರಕರಣಗಳು ದಾಖಲಾಗಿವೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 2,840 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 17,52,509ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 68 ಮಂದಿ ಸೋಂಕಿತರು ಸಾವುನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 46,102ಕ್ಕೆ ಏರಿಕೆಯಾಗಿದೆ. ಅಂತೆಯೇ ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 5,123 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 16,23,503ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಪ್ರಸ್ತುತ 81,925 ಸಕ್ರಿಯ ಸೋಂಕು ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 541 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮುಂಬೈನ ಒಟ್ಟಾರೆ ಸೋಂಕಿತರ ಸಂಖ್ಯೆ 2,70,654ಕ್ಕೆ ಏರಿಕೆಯಾಗಿದ್ದು, 10,596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com