ಗೋವುಗಳ ಸಂರಕ್ಷಣೆಗಾಗಿಯೇ ಪ್ರತ್ಯೇಕ ಸಚಿವಾಲಯ ರಚಿಸಲು ಮಧ್ಯಪ್ರದೇಶ ಸರ್ಕಾರ ಮುಂದು

ಗೋವುಗಳ ಸಂರಕ್ಷಣೆಗಾಗಿಯೇ ಪ್ರತ್ಯೇಕ ಸಚಿವಾಲಯವೊಂದನ್ನು ರಚನೆ ಮಾಡಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. 
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
Updated on: 

ಭೋಪಾಲ್: ಗೋವುಗಳ ಸಂರಕ್ಷಣೆಗಾಗಿಯೇ ಪ್ರತ್ಯೇಕ ಸಚಿವಾಲಯವೊಂದನ್ನು ರಚನೆ ಮಾಡಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. 

ಪಶುಸಂಗೋಪನೆ, ಅರಣ್ಯ, ಪಂಚಾಯತ್, ಗ್ರಾಮೀಣಾಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಗೋವು ಸಚಿವಾಲಯದ ಒಂದು ಭಾಗವಾಗಲಿದ ಎಂದು ವರದಿಗಳು ತಿಳಿಸಿವೆ. 

ಈ ಕುರಿತು ಸ್ವತಃ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆಗೆ ಸಚಿವಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಶುಪಾಲನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯನ್ನು ಗೋವು ಸಚಿವಾಲಯದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com