ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಒಂದೇ ಇಲಾಖೆಯಾಗಿಸಲು ಚಿಂತನೆ: ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ. 
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
Updated on

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ. 

ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದಲೇ ಎಲ್ಲ ಪರೀಕ್ಷೆಗಳನ್ನು ಉಚಿತ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸ ಆಕ್ಸಿಜನ್ ಘಟಕ, 200 ಹಾಸಿಗೆಗಳ ನೇತ್ರ, ಇಎನ್ ಟಿ ವಾರ್ಡ್, 90 ಹಾಸಿಗೆಗಳ ಮಕ್ಕಳ ವಾರ್ಡ್ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಈ ಎರಡೂ ಇಲಾಖೆಗಳು ಒಂದೇ ನಿರ್ವಹಣೆಯಲ್ಲಿರಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎರಡೂ ಇಲಾಖೆಗಳ ಹೊಣೆಯನ್ನು ನನಗೆ ನೀಡಿದ್ದಾರೆ. ಇದರಿಂದ ಆರೋಗ್ಯ ಕ್ಷೇತ್ರದ ನಿರ್ವಹಣೆ ಸುಲಭವಾಗಲಿದೆ. ಮುಂದಿನ ದಿನಗಳಲ್ಲಿ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಬಗೆಯ ಪರೀಕ್ಷೆಗಳನ್ನು ಜನವರಿಯಿಂದಲೇ ಉಚಿತ ಮಾಡಲಾಗುವುದು ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಶೌಚಾಲಯ, ವಾರ್ಡ್ ಸ್ವಚ್ಛವಿಲ್ಲ ಎಂಬ ಆಪಾದನೆ ಇದೆ. ಬೆಳಗಾವಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ತಿಂಗಳಿಗೆ 36 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಆದರೂ ಸ್ವಚ್ಛವಿಲ್ಲ ಎಂದರೆ ನೋವಾಗುತ್ತದೆ. ಖಾಸಗಿಗಿಂತ ಸರ್ಕಾರಿ ಆಸ್ಪತ್ರೆಗೆ ಹೆಚ್ಚು ಖರ್ಚು ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗೆ ಸಿಗುವ ಸೌಲಭ್ಯ ಹಾಗೂ ಅವರು ಮಾಡುವ ಸೇವೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲೂ ದೊರೆಯಬೇಕು. ಎಲ್ಲರೂ ಈ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಕಿವಿಮಾತು  ಹೇಳಿದರು.
 
ಲಸಿಕೆ ವಿತರಣೆಗೆ ಸಿದ್ಧತೆ

ಕೋವಿಡ್ ಲಸಿಕೆ ಬಂದ ನಂತರ ವಿತರಣೆಯಲ್ಲಿ ತೊಂದರೆ ಆಗಬಾರದೆಂದು ಈಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ವಿತರಿಸಲಾಗುವುದು. ಲಸಿಕೆ ಸಂಗ್ರಹಣೆಗೆ ಎಲ್ಲ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸಚಿವರು ಹೇಳಿದ ಇತರೆ ಅಂಶಗಳು

  • *ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು
  • *ವೈದ್ಯಾಧಿಕಾರಿಗಳು ವಾರದಲ್ಲಿ ಒಂದೆರಡು ದಿನ ಪ್ರವಾಸ ಮಾಡಿ, ಸ್ಥಳೀಯ ಸರ್ಕಾರಿ ಆರೋಗ್ಯ ಸೇವೆಯಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಬೇಕು
  • *ಜನಸಂಖ್ಯೆಗೆ ತಕ್ಕಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು
  • *ಕೋವಿಡ್ ನಿಯಂತ್ರಣದಲ್ಲಿ ಬೆಳಗಾವಿ ಮಾದರಿ. ಈ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೊಳಗಾದವರಲ್ಲಿ 97% ರಷ್ಟು ಮಂದಿ ಗುಣಮುಖರಾಗಿದ್ದಾರೆ. 2 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ. ಕೋವಿಡ್ ಮರಣ ಪ್ರಮಾಣ 0.8% ರಷ್ಟಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com