ಬಿಹಾರದಲ್ಲಿ ನಕ್ಸಲರ ವಿರುದ್ಧ ಎನ್ ಕೌಂಟರ್; 3 ನಕ್ಸಲರ ಹತ್ಯೆ

ಬಿಹಾರದಲ್ಲಿ ನಕ್ಸಲರ ವಿರುದ್ಧ ಭೀಕರ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂರು ನಕ್ಸಲರು ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಪಾಟ್ನಾ: ಬಿಹಾರದಲ್ಲಿ ನಕ್ಸಲರ ವಿರುದ್ಧ ಭೀಕರ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂರು ನಕ್ಸಲರು ಸಾವನ್ನಪ್ಪಿದ್ದಾರೆ.

ಶನಿವಾರ ತಡರಾತ್ರಿ ಈ ಎನ್ ಕೌಂಟರ್ ನಡೆದಿದ್ದು, ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿಯಲ್ಲಿ  ಈ ಎನ್ ಕೌಂಟರ್ ನಡೆದಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದವು. ಈ ವೇಳೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳ ತಪಾಸಣೆ ನಡೆಸಿದಾಗ  ಮೂವರು ನಕ್ಸಲರ ಶವ ಪತ್ತೆಯಾಗಿದೆ. ಕೋಬ್ರಾ 205 ನೇ ಬೆಟಾಲಿಯನ್ ನೇತೃತ್ವದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಬಿಹಾರ ಪೊಲೀಸ್ ಸಿಬ್ಬಂದಿಯ ಸಹಯೋಗದೊಂದಿಗೆ ಕಾರ್ಯಾಚರಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com