ಮಥುರಾ ಆಶ್ರಮದಲ್ಲಿ ಟೀ ಸೇವಿಸಿ ಇಬ್ಬರು ಸಾಧುಗಳು ಸಾವು, ಮತ್ತೊಬ್ಬರು ಆಸ್ಪತ್ರೆಗೆ ದಾಖಲು

ಮಥುರಾದ ಆಶ್ರಮದಲ್ಲಿ ಟೀ ಕುಡಿದ ಸಾಧುಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮಥುರಾ: ಮಥುರಾದ ಆಶ್ರಮದಲ್ಲಿ ಟೀ ಕುಡಿದ ಸಾಧುಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮೃತ ಸಾಧುಗಳನ್ನು ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂದು ಗುರುತಿಸಲಾಗಿದ್ದು, ತೀವ್ರ ಅಸ್ವಸ್ಥರಾಗಿರುವ ಮತ್ತೋರ್ವ ಸಾಧುವನ್ನು ರಾಮ್ ಬಾಬು ಎಂದು ಗುರುತಿಸಲಾಗಿದೆ. ಅಸ್ವಸ್ಥರಾಗಿರುವ ಸಾಧುವನ್ನು ರಾಮ್ ಬಾಬು  ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರೆದಿದೆ. ಗುಲಾಬ್ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಶ್ಯಾಮ್ ಸುಂದರ್ ಆಸ್ಪತ್ರೆಗೆ ದಾಖಲಿಸುವೇಳೆ ಸಾವನ್ನಪ್ಪಿದ್ದಾರೆ.

ಘಟನೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಆದರೆ ಸಾಧುಗಳು ಟೀ ಕುಡಿದ ಬಳಿಕ ಅಸ್ವಸ್ಥರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ,  ಈ ಬಗ್ಗೆ ಎಸ್‌ಎಸ್‌ಪಿ ಡಾ. ಗೌರವ್ ಗ್ರೋವರ್ ಮಾತನಾಡಿ, ವಿಧಿವಿಜ್ಞಾನದ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಮೃತ ವ್ಯಕ್ತಿಗಳ  ಮರಣೋತ್ತರ ಪರೀಕ್ಷೆಯನ್ನು ವೈದ್ಯರ ತಂಡವು ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ಗುಲಾಬ್ ಸಿಂಗ್ ಕೋಸಿ ಕಲನ್ ಪೊಲೀಸ್ ಠಾಣೆ ವ್ಯಾಪ್ತಿಯ ದಲೌತಾ ಗ್ರಾಮದವರಾಗಿದ್ದು, ಶ್ಯಾಮ್ ಸುಂದರ್ ಮತ್ತು ರಾಮ್ ಬಾಬು ಅವರು ಗೋವರ್ಧನ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಂತಾ ಗ್ರಾಮದ ನಿವಾಸಿಗಳಾಗಿದ್ದಾರೆ, ಮೃತ ಗೋಪಾಲ್‌ ಅವರ ಸೋದರರು,  ಆಶ್ರಮದೊಳಗೆ ಸಾಧುಗಳಿಗೆ ವಿಷ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com