ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್

ದೆಹಲಿಗೆ ಡಬಲ್ ಹೊಡೆತ: ಕೋವಿಡ್ ಸಾವು ಏರಿಕೆಗೆ ಕೃಷಿ ತ್ಯಾಜ್ಯ ಸುಡುವಿಕೆ ಕಾರಣ ಎಂದ ಸಚಿವ ಸತ್ಯೇಂದ್ರ ಜೈನ್

ಈಗಾಗಲೇ ಮಹಾಮಾರಿ ಕೊರೋನಾ ವೈರಸ್ ನಿಂದ ತತ್ತರಿಸಿರುವ ರಾಷ್ಟ್ರ ರಾಜಧಾನಿಗೆ ಈಗ ವಾಯು ಮಾಲಿನ್ಯದ ಹೊಡೆತ ಬಿದ್ದಿದ್ದು, ದೆಹಲಿಯಲ್ಲಿ ಕೋವಿಡ್-19 ಸಾವಿನ ಪ್ರಮಾಣ ಹೆಚ್ಚಾಗಲು ಕೃಷಿ ತ್ಯಾಜ್ಯ ಸುಡುವುದು ಪ್ರಮುಖ ಕಾರಣವಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಸೋಮವಾರ ಹೇಳಿದ್ದಾರೆ.

ನವದೆಹಲಿ: ಈಗಾಗಲೇ ಮಹಾಮಾರಿ ಕೊರೋನಾ ವೈರಸ್ ನಿಂದ ತತ್ತರಿಸಿರುವ ರಾಷ್ಟ್ರ ರಾಜಧಾನಿಗೆ ಈಗ ವಾಯು ಮಾಲಿನ್ಯದ ಹೊಡೆತ ಬಿದ್ದಿದ್ದು, ದೆಹಲಿಯಲ್ಲಿ ಕೋವಿಡ್-19 ಸಾವಿನ ಪ್ರಮಾಣ ಹೆಚ್ಚಾಗಲು ಕೃಷಿ ತ್ಯಾಜ್ಯ ಸುಡುವುದು ಪ್ರಮುಖ ಕಾರಣವಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಸೋಮವಾರ ಹೇಳಿದ್ದಾರೆ.

ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರಿಂದ ವಾಯು ಮಾಲಿನ್ಯ ಹೆಚ್ಚಾಗಿದ್ದು, ಇದು ಕೊರೋನಾ ರೋಗಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮುಂದಿನ ಎರಡು-ಮೂರು ವಾರಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಜೈನ್ ತಿಳಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಭಾರೀ ಪ್ರಮಾಣದಲ್ಲಿ ಮಾಲಿನ್ಯ ಉಂಟಾಗುತ್ತಿದೆ. ದೆಹಲಿಗೆ ಇದು ಡಬಲ್ ಹೊಡೆತ. ಕೃಷಿ ತ್ಯಾಜ್ಯ ಸುಡುವುದು ಈಗ ಸ್ವಲ್ಪ ಕಡಿಮೆಯಾಗಿರುವುದರಿಂದ ಮಾಲಿನ್ಯವೂ ಕಡಿಮೆಯಾಗಿದ್ದು, ಕೊರೋನಾ ಸಾವಿನ ಪ್ರಮಾಣವೂ ಕೆಲವೇ ವಾರಗಳಲ್ಲಿ ಇಳಿಕೆಯಾಗಲಿದೆ" ಎಂದು ಜೈನ್ ವಿಶ್ವಾಸ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಭಾನುವಾರ 6,746 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 121 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೆಹಲಿಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,391ಕ್ಕೆ ಏರಿಕೆಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com