ಕೋವಿಡ್ ಪಾಸಿಟಿವ್ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೆ ಇಳಿಸಿ: ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಕೊರೋನಾವೈರಸ್ ಚೇತರಿಕೆ ಮತ್ತು ಮರಣ ಪ್ರಮಾಣ ದರದಲ್ಲಿ ಇತರ ರಾಷ್ಟ್ರಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಆದರೆ, ಪಾಸಿಟಿವ್ ಪ್ರಮಾಣವನ್ನು ಶೇ. 5ಕ್ಕಿಂತಲೂ ಕಡಿಮೆಗೆ ಇಳಿಸಬೇಕಾಗಿದೆ, ಆರ್ ಟಿ- ಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಕೊರೋನಾವೈರಸ್ ಚೇತರಿಕೆ ಮತ್ತು ಮರಣ ಪ್ರಮಾಣ ದರದಲ್ಲಿ ಇತರ ರಾಷ್ಟ್ರಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಆದರೆ, ಪಾಸಿಟಿವ್ ಪ್ರಮಾಣವನ್ನು ಶೇ. 5ಕ್ಕಿಂತಲೂ ಕಡಿಮೆಗೆ ಇಳಿಸಬೇಕಾಗಿದೆ, ಆರ್ ಟಿ- ಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಮಾತನಾಡಿದ್ದು, ಪ್ರಸ್ತುತ ಪರಿಸ್ಥಿತಿ ಹಾಗೂ ಲಸಿಕೆ ವಿತರಣೆಗೆ ಪೂರ್ವ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗಿದೆ. ಇದೀಗ ಸ್ಪಷ್ಟ ಚಿತ್ರಣ ದೊರೆತಿದೆ. ಜಂಟಿ ಪ್ರಯತ್ನದ ಫಲವಾಗಿ ಚೇತರಿಕೆ ಹಾಗೂ ಮರಣ ಪ್ರಮಾಣದಲ್ಲಿ ಅನ್ಯ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಗಳೊಂದಿಗೆ ನಡೆದ ವರ್ಚುಯಲ್ ಸಭೆಯಲ್ಲಿ ಪ್ರಧಾನಿ ನುಡಿದರು.

ದೇಶವು ಸಾಕಷ್ಟು ಮಾಹಿತಿಯನ್ನು ಹೊಂದಿದ್ದು, ಕೋವಿಡ್ ನಿರ್ವಹಣೆಯಲ್ಲಿ ವ್ಯಾಪಕ ಅನುಭವವನ್ನು ಹೊಂದಿದೆ. ಕಾರ್ಯತಂತ್ರವನ್ನು ರೂಪಿಸುವಾಗ ಪಾಸಿಟಿವಿಟಿ ದರವನ್ನು ಶೇ. 5 ಮತ್ತು ಮರಣ ಪ್ರಮಾಣವನನು ಶೇ. 1ಕ್ಕಿಂತಲೂ ಕಡಿಮೆ ಮಾಡಬೇಕಾಗಿದೆ. 
ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ನಿರ್ಮಿಸಲು ರಾಜ್ಯಗಳು ಕೆಲಸ ಪ್ರಾರಂಭಿಸಬೇಕು ಎಂದು ಅವರು ಹೇಳಿದರು.

ಸುರಕ್ಷತೆಯು ನಮಗೆ ಪ್ರಮುಖವಾಗಿದೆ. ಲಭ್ಯವಾಗುವ ಲಸಿಕೆಗಳನ್ನು ಎಲ್ಲಾ ವೈದ್ಯಕೀಯ ಗುಣಮಟ್ಟದೊಂದಿಗೆ ಸುರಕ್ಷಿತವಾಗಿ ನಾಗರಿಕರಿಗೆ ನೀಡಲಾಗುವುದು, ಸಮನ್ವಯತೆಯೊಂದಿಗೆ ಲಸಿಕೆ ಹಂಚಿಕೆ ಕಾರ್ಯತಂತ್ರ ಕುರಿತಂತೆ ರಾಜ್ಯಗಳೊಂದಿಗೆ ಚರ್ಚಿಸಲಾಗುವುದು,  ಆರ್ ಟಿ- ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸಿ ಐಸೋಲೇಷನ್ ನಲ್ಲಿರುವ ರೋಗಿಗಳ ಮೇಲೆ ನಿಗಾ ವಹಿಸಬೇಕಾಗಿದೆ ಎಂದು ಹೇಳಿದ ಪ್ರಧಾನಿ, ಕೋವಿಡ್-19 ಕಾರ್ಯತಂತ್ರದ ಬಗ್ಗೆ ಪತ್ರದ ಮುಖೇನ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು ಎಂದರು.

ಮಹಾರಾಷ್ಟ್ರ, ಪಶ್ಟಿಮ ಬಂಗಾಳ, ಗುಜರಾತ್, ರಾಜಸ್ಥಾನ, ಛತ್ತೀಸ್ ಗಡ, ಹರಿಯಾಣ, ಕೇರಳ, ದೆಹಲಿ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮತ್ತಿತರರು  ವಿಡಿಯೋ ಕಾನ್ಫರೆನ್ಸ್  ಮೂಲಕ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com