ಕುಂಭಮೇಳ: ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಪ್ರತಿಯೊಬ್ಬರಿಗೂ ಕೋವಿಡ್-19 ಪರೀಕ್ಷೆ ಕಡ್ಡಾಯ- ರಾವತ್ 

ಹರಿದ್ವಾರದಲ್ಲಿ ಮುಂದಿನ ವರ್ಷ ಜನವರಿ 14ರಿಂದ ಆರಂಭವಾಗಲಿರುವ ಕುಂಭಮೇಳದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಮುನ್ನ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉತ್ತರ ಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರವಾತ್  ಹೇಳಿದ್ದಾರೆ.
ಕುಂಭಮೇಳ, ರವಾತ್
ಕುಂಭಮೇಳ, ರವಾತ್

ಡೆಹ್ರಾಡೂನ್: ಹರಿದ್ವಾರದಲ್ಲಿ ಮುಂದಿನ ವರ್ಷ ಜನವರಿ 14ರಿಂದ ಆರಂಭವಾಗಲಿರುವ ಕುಂಭಮೇಳದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಮುನ್ನ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉತ್ತರ ಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರವಾತ್  ಹೇಳಿದ್ದಾರೆ.

ಕುಂಭ ಮೇಳದ ಸಿದ್ಧತೆ ಕುರಿತಂತೆ ರಾಜ್ಯದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ ರಾವತ್,  ಪ್ರಮುಖ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳು ಸುರಕ್ಷಿತವಾಗಿ ಪವಿತ್ರ ಸ್ನಾನ ಮಾಡಲು ಅಗತ್ಯ ವ್ಯವಸ್ಥೆ ಮಾಡಲು ಸರ್ಕಾರ ಸಾಮೂಹಿಕವಾಗಿ ಜವಾಬ್ದಾರಿಯಾಗಿರುತ್ತದೆ. ಎಲ್ಲಾ ಸಂಬಂಧಿತ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಕುಂಭಮೇಳಕ್ಕೆ ಆಗಮಿಸುವವರಿಗಾಗಿ ಪೋರ್ಟಲ್ ನಲ್ಲಿ ಹೆಸರು ನೋಂದಣಿಗೆ ವ್ಯವಸ್ಥೆ ಮಾಡಬೇಕು, ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಅನಾರೋಗ್ಯ ಸಂಬಂಧಿತ ಪರೀಕ್ಷೆ ನಡೆಸಬೇಕು, ಕೋವಿಡ್-19 ಪರೀಕ್ಷೆ ನಡೆಸಿದ ಬಳಿಕವಷ್ಟೇ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಹರಿದ್ವಾರದಲ್ಲಿ ಒಂದು ಸಾವಿರ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣದ ಕೆಲಸವನ್ನು ತ್ವರಿತಗೊಳಿಸಬೇಕು, ಇದರೊಂದಿಗೆ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳು ಪರಿಣಾಮಕಾರಿ ವ್ಯವಸ್ಥೆಯನ್ನು ಮಾಡಬೇಕು, ಕುಂಭ ಮೇಳದಲ್ಲಿ ಪಾಲ್ಗೊಳ್ಳುವ ಭಕ್ತಾಧಿಗಳ ದಟ್ಠಣೆ ನಿಯಂತ್ರಿಸುವ ನಿಟ್ಟಿನಲ್ಲಿ ಗಮನ ಹರಿಸುವಂತೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಅವರಿಗೆ ಸೂಚಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com